ನವದೆಹಲಿ: ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಅನುದಾನ ಪ್ರಮಾಣವನ್ನು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವಾಲಯ 2025–26ನೇ ಸಾಲಿನಲ್ಲಿ ಭಾರಿ ಕಡಿತ ಮಾಡಿದೆ.

2023–24ರಲ್ಲಿ ₹12,695 ಕೋಟಿ ನೀಡಿದ್ದರೆ, 2024–25ರಲ್ಲಿ ₹11,147 ಕೋಟಿ ಹಂಚಿಕೆ ಮಾಡಲಾಗಿತ್ತು. ಈ ವರ್ಷ ನವೆಂಬರ್ ಅಂತ್ಯದವರೆಗೆ ಕೊಟ್ಟಿರುವುದು ₹6,604 ಕೋಟಿ ಮಾತ್ರ. ರಾಜ್ಯಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ.ಚಂದ್ರಶೇಖರ್ ಕೇಳಿದ ಪ್ರಶ್ನೆಗೆ ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ.

‘ರಾಜ್ಯದಲ್ಲಿ ಹಲವು ಹೆದ್ದಾರಿ ಕಾಮಗಾರಿಗಳು ಆಮೆಗತಿಯಲ್ಲಿದ್ದು, ಅನೇಕ ಯೋಜನೆಗಳ ಭೂಸ್ವಾಧೀನ ಪ್ರಕ್ರಿಯೆಯೇ ಮುಗಿದಿಲ್ಲ. ಕಾಲಮಿತಿಯಲ್ಲಿ ಕಾಮಗಾರಿ ಮುಗಿಸದಿದ್ದರೆ ಅನುದಾನ ಒದಗಿಸುವುದಿಲ್ಲ’ ಎಂದು ಸಚಿವರು ರಾಜ್ಯ ಸರ್ಕಾರಕ್ಕೆ ಈ ಹಿಂದೆ ಎಚ್ಚರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.