ಬೆಂಗಳೂರು: ‘ರಾಜ್ಯ ಸರ್ಕಾರಕ್ಕೆ ಬರಬೇಕಾದ ಹಣವನ್ನು ಕೇಂದ್ರ ಸರ್ಕಾರ ನೀಡಿದರೆ, ರಾಜ್ಯದ ಅಭಿವೃದ್ಧಿಗೆ ಸಹಾಯವಾಗುತ್ತದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯಕ್ಕೆ ಬರಬೇಕಾದ ಅನುದಾನ ಬಿಡುಗಡೆ ಮಾಡುವಂತೆ ಎರಡು ವರ್ಷದಿಂದ ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದೇವೆ. ಅನೇಕ ಕಾರಣಗಳಿಂದ ನಿಧಾನವಾಗುತ್ತಿದೆ. ಕೆಲವು ಸಂದರ್ಭದಲ್ಲಿ ಬರುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಣ ಬಿಡುಗಡೆ ಮಾಡಿಸುವಂತೆ ರಾಜ್ಯದ ಸಂಸದರಿಗೆ ಮನವಿ ಮಾಡಿದ್ದಾರೆ’ ಎಂದರು.

‘ಕೇಂದ್ರದಿಂದ ರಾಜ್ಯಕ್ಕೆ ₹ 5,500 ಕೋಟಿ ತಕ್ಷಣ ಬರಬೇಕು. ರಾಜ್ಯ ಮತ್ತು ಕೇಂದ್ರದ ನಡುವೆ ಇರುವ ಸಂಬಂಧದ ನಿಯಮಗಳನ್ನು ಆಧರಿಸಿ ಒತ್ತಾಯ ಮಾಡಬೇಕಾಗುತ್ತದೆ. ಕೊನೆಯ ಬಾರಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ, ದೆಹಲಿ ಪ್ರತಿಭಟನೆ ನಡೆಸಲಾಯಿತು. ನಮಗೆ ಬರಬೇಕಾದ ಅನುದಾನ ಮಂಜೂರು ಮಾಡಿದರೆ, ನಾವೇಕೆ ಒತ್ತಾಯಿಸುತ್ತೇವೆ’ ಎಂದರು.

‘ನಿನ್ನೆ (ಬುಧವಾರ) ನಡೆದ ಸಭೆಗೆ ಸಂಸದರು ಯಾವ ಕಾರಣಕ್ಕಾಗಿ ಬಂದಿಲ್ಲವೋ ಅವರಿಗೆ ಗೊತ್ತಿರುತ್ತದೆ. ಕೆಲಸ-ಕಾರ್ಯಗಳಿರುವುದರಿಂದ ಬಂದಿರಲಿಕ್ಕಿಲ್ಲ. ನಮ್ಮ ಸರ್ಕಾರ ಹಾಗೂ ಮುಖ್ಯಮಂತ್ರಿಯವರ ವತಿಯಿಂದ ಸಂಸದರಿಗೆ ಏನು ಗೌರವ ಕೊಡಬೇಕು ಕೊಟ್ಟಿದ್ದೇವೆ. ಇದರಲ್ಲಿ ಎರಡು ಮಾತಿಲ್ಲ. ಯಾವ ಕಾರಣಕ್ಕಾಗಿ ಸಭೆಗೆ ಬಂದಿಲ್ಲ ಎಂಬುದು ನಮಗೆ ಗೊತ್ತಿಲ್ಲ’ ಎಂದು ಹೇಳಿದರು.

‘ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇದೇ 20ರಂದು ನಡೆಯುವ ಸಮಾವೇಶ ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದ್ದೇವೆ. ಮುಖ್ಯವಾಗಿ ಕಂದಾಯ ಇಲಾಖೆಯಿಂದ 50 ಸಾವಿರಕ್ಕೂ ಹೆಚ್ಚು ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಇದೊಂದು ಸರ್ಕಾರದ ಕಾರ್ಯಕ್ರಮ. ಲೋಕಸಭೆ ವಿರೋಧ ಪಕ್ಷ ನಾಯಕರಾದ ರಾಹುಲ್ ಗಾಂಧಿ, ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಪಕ್ಷದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಗ್ರೇಟರ್ ಬೆಂಗಳೂರು ಪರಿಕಲ್ಪನೆಯಲ್ಲಿ ನ್ಯೂನತೆಗಳಿದ್ದರೆ ಸರಿಪಡಿಸಿಕೊಳ್ಳುತ್ತೇವೆ. ಗ್ರೇಟರ್ ಬೆಂಗಳೂರಿನಿಂದ ಯೋಜನೆಗಳನ್ನು ನೀಡಲು, ಸಮಸ್ಯೆಗಳ ಬಗ್ಗೆ ಹೆಚ್ಚು ಗಮನ ಹರಿಸಲು ಅನುಕೂಲ ಆಗಬಹುದು ಎಂಬುದು ಮುಖ್ಯ ಉದ್ದೇಶ’ ಎಂದು ಹೇಳಿದರು.

ಬೆಳಗಾವಿ ಎಸ್ಪಿಗೆ ಸೂಚಿಸಿದ್ದೇನೆ: ಮಧ್ಯಪ್ರದೇಶದ ಸಚಿವ ವಿಜಯ್ ಶಾ ಎಂಬುವರು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, ‘ಕರ್ನಲ್ ಸೋಫಿಯಾ ಖುರೇಷಿ ಅವರು ಬೆಳಗಾವಿಯ ಸೊಸೆ. ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವನ ವಿರುದ್ಧ ಎಫ್ಐಆರ್ ಮಾಡಿಕೊಂಡು, ಕ್ರಮ ತೆಗೆದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರಕ್ಕೆ ತಿಳಿಸುವಂತೆ ಬೆಳಗಾವಿ ಎಸ್ಪಿ ಅವರಿಗೆ ಸೂಚಿಸಿದ್ದೇನೆ. ಬಿಜೆಪಿ ಮುಖಂಡನ ಹೇಳಿಕೆ ಕರ್ನಲ್ ಖುರೇಷಿ ಅವರಿಗಷ್ಟೆ ಅವಮಾನದಂತೆ ಅಲ್ಲ. ಇಡೀ ದೇಶಕ್ಕೆ ಅವಮಾನ ಮಾಡಿದಂತೆ. ಇಂತಹ ಕೀಳು ಮನಸ್ಸು ಯಾರಿಗೂ ಬರಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.