ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಕ್ಕೆ ಬಿಡುಗಡೆಯಾಗದ ಸಂಸದರ ನಿಧಿ: ರಮೇಶ್‌ ಬಾಬು ಟೀಕೆ

Published 2 ಡಿಸೆಂಬರ್ 2023, 16:16 IST
Last Updated 2 ಡಿಸೆಂಬರ್ 2023, 16:16 IST
ಅಕ್ಷರ ಗಾತ್ರ

ಬೆಂಗಳೂರು: ‘ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯಡಿ ಸಂಸದರಿಗೆ ವಾರ್ಷಿಕ ನೀಡುವ ₹ 5 ಕೋಟಿಯನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ಇದು ಮೋದಿ ಸರ್ಕಾರದ ದಿವಾಳಿತನ ತೋರಿಸುತ್ತದೆ’ ಎಂದು ಕೆಪಿಸಿಸಿ ವಕ್ತಾರ ರಮೇಶ್‌ ಬಾಬು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕರ್ನಾಟಕದ ಬಿಜೆಪಿ ಲೋಕಸಭಾ ಸದಸ್ಯರು ತಮ್ಮ ಪಾಲಿನ ಹಣವನ್ನು ಕೇಳದೆ ಕದ್ದು ಓಡಾಡುತ್ತಿದ್ದಾರೆ’ ಎಂದರು.

‘ರಾಜ್ಯದಲ್ಲಿ ತೀವ್ರವಾದ ಬರಗಾಲವಿದ್ದು, ತೋರಿಕೆಗಾಗಿ ಬರಪರಿಹಾರಕ್ಕಾಗಿ ಒತ್ತಾಯಿಸುವ ರಾಜ್ಯದ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು, ಕೇಂದ್ರ ಸರ್ಕಾರ ನಿಯಮಾನುಸಾರ ನೀಡಬೇಕಿದ್ದ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿಲ್ಲ. ಕಾನೂನಿನ ಪ್ರಕಾರ ಅವಕಾಶವಿರುವ ಹಣವನ್ನೇ ಬಳಸದ ರಾಜ್ಯ ಬಿಜೆಪಿ ಸಂಸದರು ಮತ್ತು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರ ಹಣಕಾಸು ಸಚಿವರಾಗಿರುವ ನಿರ್ಮಲ ಸೀತಾರಾಮನ್ ಅವರು ಕರ್ನಾಟಕಕ್ಕೆ ಮೋಸ ಎಸಗಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT