ಹೋರಾಟಗಾರರ ಮೇಲಿನ ಮೊಕದ್ದಮೆ ವಾಪಸ್‌ಗೆ
ಆಗ್ರಹ ಕನ್ನಡ ನಾಮಫಲಕ ಅಭಿಯಾನದಲ್ಲಿ ಪಾಲ್ಗೊಂಡ ಹೋರಾಟಗಾರರ ವಿರುದ್ಧ ದಾಖಲಿಸಿರುವ ಪ್ರಕರಣ ವಾಪಸ್ ಪಡೆಯಬೇಕು ಎಂದು ಸದಸ್ಯರು ಪಕ್ಷಭೇದ ಮರೆತು ಆಗ್ರಹಿಸಿದರು. ಹೋರಾಟ ಮಾಡದೇ ಇದ್ದರೆ ಸರ್ಕಾರವು ಕಾಯ್ದೆಗೆ ತಿದ್ದುಪಡಿ ತರುತ್ತಿರಲಿಲ್ಲ. ಹಾಗಂತ ಹಿಂಸಾತ್ಮಕ ಹೋರಾಟವನ್ನು ನಾವು ಒಪ್ಪುವುದಿಲ್ಲ. ಕನ್ನಡಕ್ಕಾಗಿ ಹೋರಾಟ ನಡೆಸಿದ ವಿರುದ್ಧ ಗಂಭೀರ ಪ್ರಕರಣಗಳನ್ನು ಹೂಡಿದ್ದೂ ಸರಿಯಲ್ಲ ಎಂದು ಸದಸ್ಯರು ಪ್ರತಿಪಾದಿಸಿದರು. ಮೊಕದ್ದಮೆ ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಜತೆ ಚರ್ಚಿಸುವುದಾಗಿ ಸಚಿವ ತಂಗಡಗಿ ಹೇಳಿದರು.