ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ ಉದ್ಯೋಗ ಮಿತಿ ಹೆಚ್ಚಿಸಲು ಅನುಮತಿ ನೀಡದ ಕೇಂದ್ರ ಸರ್ಕಾರ: ಸಿಎಂ ವಾಗ್ದಾಳಿ

Published 29 ನವೆಂಬರ್ 2023, 9:00 IST
Last Updated 29 ನವೆಂಬರ್ 2023, 9:00 IST
ಅಕ್ಷರ ಗಾತ್ರ

ಹಾವೇರಿ: 'ಬರಗಾಲ ಸಮಯದಲ್ಲಿ ನರೇಗಾ ಯೋಜನೆಯಡಿ 150 ದಿನಗಳವರೆಗೆ ಕೆಲಸ ಕೊಡಬೇಕೆನ್ನುವ ನಿಯಮ ಇದ್ದರೂ ಕೇಂದ್ರ ಸರ್ಕಾರ ದುಡಿಮೆಯ ದಿನ ಹೆಚ್ಚಸಲು ಅನುಮತಿ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕಾಗಿನೆಲೆ ಹೆಲಿಪ್ಯಾಡ್ ನಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಕರ್ನಾಟಕದಲ್ಲಿ ‌ಮಾತ್ರ ಅಲ್ಲ, ದೇಶದ 12 ರಾಜ್ಯಗಳಲ್ಲಿ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ದುಡಿಯುವ ಜನರಿಗೆ ಹೆಚ್ಚಿನ ದುಡಿಯುವ ಅವಕಾಶಗಳನ್ನು ನೀಡಬೇಕಾಗಿದೆ. ನರೇಗಾ ಯೋಜನೆಯಡಿ ಈಗ ನೀಡಲಾಗುತ್ತಿರುವ 100 ದಿನಗಳ ಉದ್ಯೋಗವನ್ನು 150 ದಿನಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೆ ಅನುಮತಿ ನೀಡಿಲ್ಲ ಎಂದು ಹೇಳಿದರು.

ಬರ ಪರಿಹಾರ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಕೈಗೊಳ್ಳುತ್ತಿದೆ. ಆದರೆ, ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಇದುವರೆಗೆ ಒಂದು ಪೈಸೆಯೂ ಕೊಟ್ಟಿಲ್ಲ ಎಂದು ನುಡಿದರು.

ರಾಜ್ಯ ಕೊಟ್ಟಿರುವ ತೆರಿಗೆ ಹಣವನ್ನು ವಾಪಸ್ ನಮಗೆ ಕೊಡುತ್ತಿಲ್ಲ ಎಂದು ನುಡಿದರು.

ರಾಜ್ಯದಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ನಿರಂತರ ಸಭೆ ನಡೆಸಿ, ಕಾಮಗಾರಿಗಳ ಮೇಲ್ವಿಚಾರಣೆ ನಡೆಸುವಂತೆ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರಿಗೂ ತಿಳಿಸಿದ್ದೇನೆ ಎಂದು ಹೇಳಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT