ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಪೇಗೌಡರು ಕನ್ನಡಿಗರ ಅಸ್ಮಿತೆ: ಎಚ್.ಡಿ.ಕುಮಾರಸ್ವಾಮಿ

Published 26 ಜೂನ್ 2024, 16:05 IST
Last Updated 26 ಜೂನ್ 2024, 16:05 IST
ಅಕ್ಷರ ಗಾತ್ರ

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ’ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಹೃದಯದಲ್ಲಿ ಗೌರವ ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಅವರು ಒತ್ತಾಯಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ’ ಎಂದರು.

‘ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಕೆಂಪೇಗೌಡರು. ಅವರು ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಆ ಕೆರೆಗಳನ್ನು ಕಾಪಾಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿಯುವ ನೀರು ತರುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಗರದ ಜಲಮೂಲಗಳಾಗಿದ್ದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೆ’ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

‘ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಒಮ್ಮತದಿಂದ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುತ್ತದೆ. ಇನ್ನೂ ಸಾಕಷ್ಟು ಸಮಯ ಇದೆ. ನಾವು ನಿರ್ಧಾರ ಮಾಡುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT