ಬೆಳಗಾವಿ:'ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸಲ್ಲಿಸಿರುವ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ' ಎಂದು ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ತಿಳಿಸಿದರು.

'ರಾಜ್ಯದ ಪ್ರಸ್ತಾವ ಹಾಗೂ ಕೇಂದ್ರ ತಂಡದ ವರದಿ ಹೊಂದಾಣಿಕೆ ಆಗುತ್ತಿಲ್ಲ. ಈ ಕಾರಣಕ್ಕೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ' ಎಂದು ಸಮರ್ಥಿಸಿಕೊಂಡರು.

ಇದನ್ನೂ ಓದಿ:ಪ್ರವಾಹ ನಷ್ಟದ ಅಂದಾಜು: ರಾಜ್ಯದ ವರದಿ ತಿರಸ್ಕರಿಸಿದ ಕೇಂದ್ರ

'ಸ್ಪಷ್ಟನೆ ಹಾಗೂ ಮಾಹಿತಿ ನೀಡಲೆಂದೇನಮ್ಮ ಇಬ್ಬರು ಅಧಿಕಾರಿಗಳನ್ನು ದೆಹಲಿಗೆ ಕಳಿಸಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ವರದಿಯನ್ನು ತಿರಸ್ಕರಿಸಿದೆ ಎಂಬುದು ಸುಳ್ಳು. ಕೇಂದ್ರದ ಎಲ್ಲ ಸಚಿವರೊಂದಿಗೂ ಮಾತನಾಡಿದ್ದೇನೆ. ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ಪರಿಹಾರ ಹಣ ಬಿಡುಗಡೆ ಆಗಲಿದೆ'ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ದೇಶದ ಯಾವ ಪ್ರವಾಹಪೀಡಿತ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಆಗುವ ವಿಶ್ವಾಸ ಇದೆ' ಎಂದರು.

ಇದನ್ನೂ ಓದಿ:ನೆರೆ ಸಂತ್ರಸ್ತರಿಗೆ ಕೇಂದ್ರಸರ್ಕಾರದಿಂದ ಬಿಡುಗಡೆಯಾಗದ ಪರಿಹಾರ: ಅಸಹಾಯಕರಾದ ಸಿ.ಎಂ

'ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ. ಖಾಲಿ ಆಗಿದ್ದರೆ ಪ್ರವಾಹ ಪರಿಹಾರಕ್ಕೆ ಇಷ್ಟೊಂದು ಹಣ ನೀಡಲು ಆಗುತ್ತಿರಲಿಲ್ಲ. ಮುಂದಿನ ಬಜೆಟ್ ನಲ್ಲಿ ಸಂತ್ರಸ್ತರ ಪುನರ್ವಸತಿಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.