ಬೆಂಗಳೂರು: ಕಳೆದ ನಾಲ್ಕು ತಿಂಗಳಲ್ಲಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಆಗಿರುವ ಹಾನಿಯನ್ನು ಅಧ್ಯಯನ ಮಾಡಲು ಕೇಂದ್ರದ ತಂಡ ಮಂಗಳವಾರ ರಾಜ್ಯಕ್ಕೆ ಬರಲಿದೆ.

ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ಅವರ ನೇತೃತ್ವದ ಮೂರು ತಂಡಗಳು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ ಅವರ ಜತೆ ಚರ್ಚೆ ನಡೆಸಿದ ನಂತರ ಸೆ. 9 ರವರೆಗೆ ವಿವಿಧ ಜಿಲ್ಲೆಗಳ ಮಳೆ–ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.

ಕೇಂದ್ರ ಜಲ ಆಯೋಗದ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಮತ್ತು ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಕೆ.ಮನೋಹರನ್ ಅವರು ಇನ್ನೆರಡು ತಂಡಗಳಲ್ಲಿ ಇರಲಿದ್ದಾರೆ. ಚಿತ್ರ
ದುರ್ಗ, ಚಿಕ್ಕ ಮಗಳೂರು, ಹಾಸನ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ತಂಡಗಳು ನೀಡಲಿವೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.