ನವದೆಹಲಿ: ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಿದೆ.

ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸಕಾರಾತ್ಮಕ ಸಮ್ಮತಿ ನೀಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂಪಾಯಿಗಳಂತೆ ಒಟ್ಟು ₹4 ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ.

ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.

2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ ಪಿಡಿಪಿಎಸ್ ಯೋಜನೆಯ ಅನುಷ್ಠಾನಕ್ಕೆ ಚಲುವರಾಯಸ್ವಾಮಿ ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರು ಸಮ್ಮತಿ ನೀಡಿದರು.

2.5 ಲಕ್ಷ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋಮವಾರ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ಇದೆ.

ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲೊಂದಾಗಿದೆ. 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 8 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ. ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.

ಕರ್ನಾಟಕದಲ್ಲಿ ಮಾವಿನ ಕೊಯಿಲು ಮೇನಿಂದ ಜುಲೈವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.

ಮೇ ತಿಂಗಳಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಲ್ಗೆ ₹1,200 ರಿಂದ ₹2,500 ರವರೆಗೆ ಇತ್ತು.

ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿಗೆ ಪ್ರತಿ ಕ್ವಿಂಟಲ್ಗೆ ₹450-550ಕ್ಕೆ ಕುಸಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.