ನವದೆಹಲಿ: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚದಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್, ‘ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿ ಅವರಿಗೆ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಪತ್ರ ಬರೆದಿದ್ದಾರೆ’ ಎಂದಿದ್ದಾರೆ.

ಜನೌಷಧಿ ಕೇಂದ್ರಗಳಲ್ಲಿ ಗುಣಮಟ್ಟದ ಔಷಧಿಗಳು ಕಡಿಮೆ ಬೆಲೆಗೆ ಸಿಗುತ್ತಿವೆ. ಇದರಿಂದಾಗಿ, ರಾಜ್ಯದ ನಾಗರಿಕರಿಗೆ ಕಳೆದ 10 ವರ್ಷಗಳಲ್ಲಿ ₹5,700 ಕೋಟಿ ಉಳಿತಾಯ ಆಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನಡ್ಡಾ ಪತ್ರ ಬರೆದಿರುವ ವಿಷಯ ನನಗೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯೆ ನೀಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.