ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಇದೇ 28ರಿಂದ 30ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ರಾಜ್ಯದ 530 ಕೇಂದ್ರಗಳಲ್ಲಿ ನಡೆಯಲಿದೆ.
‘ಒಟ್ಟು 2,01,816 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, ಕೋವಿಡ್ ಗಮನದಲ್ಲಿರಿಸಿಕೊಂಡು ಎಲ್ಲ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
28ರಂದು ಜೀವವಿಜ್ಞಾನ ಮತ್ತು ಗಣಿತ, 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಇದೇ 30ರಂದು ಕನ್ನಡ ಪರೀಕ್ಷೆ ನಡೆಯಲಿದೆ.
ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಯುವ ಈ ಪರೀಕ್ಷೆಗೆ 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.