ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಠ್ಯಕ್ಕೆ ಹೊರತಾದ 19 ಪ್ರಶ್ನೆಗಳಿದ್ದವು ಎಂದು ತಜ್ಞರ ಸಮಿತಿ ವರದಿ ನೀಡಿದೆ.

ಕಳೆದ ಬಾರಿಯ ಸಿಇಟಿ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ಕೆ ಹೊರತಾದ 50 ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ವಿಷಯವಾರು ಉಪನ್ಯಾಸಕರು, ವಿದ್ಯಾರ್ಥಿಗಳು ದೂರಿದ್ದರು. ಇಂತಹ ಪ್ರಮಾದ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯಗಳ ತಜ್ಞರು ನೀಡಿದ ಪ್ರಾಥಮಿಕ ಮಾಹಿತಿಯಂತೆ ಪಠ್ಯಕ್ಕೆ ಹೊರತಾದ 50 ಪ್ರಶ್ನೆಗಳನ್ನು ಕೈಬಿಟ್ಟಿದ್ದ ಕೆಇಎ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿ, ಫಲಿತಾಂಶ ಪ್ರಕಟಿಸಿತ್ತು.

ಈ ಕುರಿತು ತನಿಖೆ ನಡೆಸಲು ನಿವೃತ್ತ ಐಎಎಸ್ ಅಧಿಕಾರಿ ಡಿ.ಎನ್. ನರಸಿಂಹರಾಜು ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಉನ್ನತ ಶಿಕ್ಷಣ ಇಲಾಖೆ ರಚಿಸಿತ್ತು. ದ್ವಿತೀಯ ಪಿಯು ಪಠ್ಯ ಪುಸ್ತಕಗಳು, ಆಯಾ ವಿಷಯಗಳ ತಜ್ಞರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯ ಪಡೆದು ರೂಪಿಸಿದ ವರದಿಯನ್ನು ಸಮಿತಿ ಈಚೆಗೆ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.