ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿಪರ ಕೋರ್ಸ್‌ಗಳಿಗೆ ಸಿಇಟಿ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Published 18 ಮಾರ್ಚ್ 2024, 16:01 IST
Last Updated 18 ಮಾರ್ಚ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅರ್ಜಿ ಸಲ್ಲಿಸಲು ಮಾರ್ಚ್ 20ರ ರಾತ್ರಿ 12 ಗಂಟೆಯವರೆಗೆ ಅವಧಿ ವಿಸ್ತರಿಸಲಾಗಿದೆ. ಶುಲ್ಕ ಪಾವತಿಸಲು ಮಾರ್ಚ್ 21ರ ಸಂಜೆ 5.30ರವರೆಗೆ ಕಾಲಾವಕಾಶ ನೀಡಲಾಗಿದೆ.

‘ಈ ಅವಕಾಶದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುವುದು. ಏಪ್ರಿಲ್ 18 ಮತ್ತು 19ರಂದು ಸಿಇಟಿ ನಡೆಯಲಿದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದರು.

‘ಈಗಾಗಲೇ 3,75,399 ವಿದ್ಯಾರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದು, 3,44,883 ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಕಳೆದ ವರ್ಷಕ್ಕಿಂತ‌ ಒಂದು ಲಕ್ಷ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ’ ಎಂದೂ ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT