ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಪರೀಕ್ಷೆ (ಸಿಇಟಿ-2021) ಬರೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ ಜುಲೈ 16ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶುಲ್ಕ ಪಾವತಿಗೆ ಇದ್ದ ಅವಧಿಯನ್ನು ಇದೇ 19ರವರೆಗೂ ಅವಕಾಶ ಕಲ್ಪಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಇದೇ 14ರಿಂದ 20ರವರೆಗೆ ಅವಕಾಶ ನೀಡಲಾಗಿದೆ. ಎನ್‌ಸಿಸಿ, ಕ್ರೀಡೆ, ರಕ್ಷಣೆ, ರಕ್ಷಣೆ (ನಿವೃತ್ತ), ಸ್ಕೌಟ್ಸ್ ಅಂಡ್ ಗೈಡ್ಸ್ ವರ್ಗಗಳಡಿ ಮೀಸಲಾತಿ ಬಯಸುವ ಅಭ್ಯರ್ಥಿಗಳು ನಿಗದಿಪಡಿಸಿರುವ, ತಮಗೆ ಹತ್ತಿರವಾದ ಯಾವುದಾದರೂ ಕೇಂದ್ರಕ್ಕೆ ತೆರಳಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ.

ವಿವರಗಳಿಗೆ http://kea.kar.nic.in ವೆಬ್‌ತಾಣ ನೋಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.