ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿಗೆ ಅವಕಾಶ

Published 9 ಮೇ 2023, 19:37 IST
Last Updated 9 ಮೇ 2023, 19:37 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮೇ 11ರ ಬೆಳಿಗ್ಗೆ 8ರಿಂದ 13ರ ಬೆಳಿಗ್ಗೆ 11ರವರೆಗೆ ಹಾಗೂ ಶುಲ್ಕ ಪಾವತಿಸಲು ಅಂದು ಸಂಜೆ 6ರ ತನಕ ಕೊನೆಯ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಪೋಷಕರ, ವಿದ್ಯಾರ್ಥಿಗಳ ಮನವಿಯ ಮೇರೆಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿಎಸ್‌ಸಿ (ನರ್ಸಿಂಗ್) ಮುಂತಾದ ಕೋರ್ಸ್‌ಗಳಿಗೆ 2023ರಲ್ಲಿ ಪ್ರವೇಶಾವಕಾಶ ಬಯಸುವ ವಿದ್ಯಾರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್: http://kea.kar.nic.inನಲ್ಲಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT