ಬೆಂಗಳೂರು: ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಶಿಕ್ಷಣ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.23 ಮತ್ತು 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುತ್ತಿದ್ದು, ಪರೀಕ್ಷಾ ಅಕ್ರಮಗಳ ತಡೆಗೆ 745 ಪರೀಕ್ಷಾ ಕೇಂದ್ರಗಳಲ್ಲಿ 15,265 ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ.

ಏ.23 ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಹಾಗೂ ಏ.24ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಹೊರನಾಡು ಮತ್ತು ಗಡಿನಾಡು ಕನ್ನಡಿಗರಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ಬೆಂಗಳೂರು, ಮಂಗಳೂರು, ವಿಜಯಪುರ ಮತ್ತು ಬೆಳಗಾವಿ ನಗರಗಳ ಒಟ್ಟು ಐದು ಕೇಂದ್ರಗಳಲ್ಲಿ ಆಯೋಜಿಸಲಾಗಿದೆ.

‘ಪರೀಕ್ಷಾ ಅಕ್ರಮಗಳನ್ನು ತಡೆಯಲು ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮೇಲುಸ್ತುವಾರಿ ನಡೆಸಲಿದ್ದಾರೆ. ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಸಿದ್ದು, ಅಕ್ರಮಗಳಿಗೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಂಗಳೂರಿನ 163 ಕೇಂದ್ರಗಳಲ್ಲಿ ಅತಿ ಹೆಚ್ಚು ಅಂದರೆ 77,604 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಕೆಇಎ ಕಚೇರಿಯಲ್ಲಿ ನಿಯಂತ್ರಣ ಕೇಂದ್ರ ಸ್ಥಾಪಿಸಲಾಗಿದೆ’ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ.

ಎರಡು ಗಂಟೆ ಮೊದಲು ತಪಾಸಣೆ: ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಕನಿಷ್ಠ 2 ಗಂಟೆ ಮುಂಚಿತವಾಗಿ ಅವರು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಕೋಡ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ. ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಪಡೆಯುವಾಗಲೂ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಲಾಗುತ್ತದೆ. ನಕಲಿ ಅಭ್ಯರ್ಥಿಗಳಿಗೆ ಕಡಿವಾಣ ಹಾಕಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಶ್ರವಣ ಸಾಧನ ಬಳಸಿಕೊಂಡು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಲಾಗುತ್ತದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.