ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಪ ಎಸಗಿದವರ ವಿರುದ್ಧ ಕ್ರಮ ಇಲ್ಲ: ಶಿಕ್ಷಣ ಇಲಾಖೆ ನಿರಾಸಕ್ತಿ

Published 29 ಏಪ್ರಿಲ್ 2024, 16:20 IST
Last Updated 29 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ಬೆಂಗಳೂರು: ಪಠ್ಯಕ್ಕೆ ಹೊರತಾದ ಪ್ರಶ್ನೆಗಳು ಸೇರಲು ಕಾರಣರಾದವರ ವಿರುದ್ಧ ಕ್ರಮ ಜರುಗಿಸಲು ಉನ್ನತ ಶಿಕ್ಷಣ ಇಲಾಖೆ ನಿರಾಸಕ್ತಿ ತೋರಿದೆ.

ವಿದ್ಯಾರ್ಥಿಗಳಿಗೆ ಪರಿಹಾರ ದೊರಕಿಸಲು ನಾಲ್ಕು ಸಮಿತಿಗಳನ್ನು ರಚಿಸಿ, ನಾಲ್ಕು ದಿನಗಳಲ್ಲಿ ವರದಿ ಪಡೆದು ತ್ವರಿತ ಕ್ರಮ ಕೈಗೊಂಡ ಇಲಾಖೆ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವಾಗ ಲೋಪ ಎಸಗಿದವರನ್ನು ಪತ್ತೆ ಮಾಡಿ, ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದೆ.

‘ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೆಇಎ ಹೊರಗಿನ ವಿಷಯ ತಜ್ಞರನ್ನು ಬಳಸಿಕೊಂಡಿತ್ತು. ಕೋರಿಕೆ ಮೇರೆಗೆ ಅವರು ಕೆಲಸ ಮಾಡಿದ್ದಾರೆ. ಸಂವಹನದ ಕೊರತೆ, ಪಿಯು ಇಲಾಖಾ ವೆಬ್‌ಸೈಟ್‌ನಲ್ಲಿ ಕೈಬಿಟ್ಟ ಪಠ್ಯಗಳನ್ನು ಸಕಾಲಕ್ಕೆ ಅಪ್‌ಲೋಡ್‌ ಮಾಡದ ಕಾರಣಗಳಿಂದ ಸಮಸ್ಯೆಯಾಗಿದೆ. ಹಾಗಾಗಿ, ಅಧಿಕಾರಿಗಳು ಹಾಗೂ ವಿಷಯ ತಜ್ಞರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಬದಲು ಭವಿಷ್ಯದಲ್ಲಿ ಇಂತಹ ಪ್ರಮಾದ ಆಗದಂತೆ ತಡೆಯಲು ಆದ್ಯತೆ ನೀಡಲಾಗಿದೆ’ ಎನ್ನುತ್ತಾರೆ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT