ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ 22, 23ಕ್ಕೆ ಸಿಇಟಿ ಪರೀಕ್ಷೆ

Last Updated 1 ಜನವರಿ 2020, 20:57 IST
ಅಕ್ಷರ ಗಾತ್ರ

ಬೆಂಗಳೂರು: ಎಂಜಿನಿಯರಿಂಗ್‌ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವುದಕ್ಕಾಗಿ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆ ಏಪ್ರಿಲ್‌ 22 ಮತ್ತು 23ರಂದು ನಡೆಯಲಿದೆ.

22ರಂದು ಬೆಳಿಗ್ಗೆ 10.30 ರಿಂದ 11.50ರವರೆಗೆ ಜೀವವಿಜ್ಞಾನ, 2.30ರಿಂದ 3.50 ರವರೆಗೆ ಗಣಿತ, 23ರಂದು ಬೆಳಿಗ್ಗೆ 10.30ರಿಂದ 11.50ರವರೆಗೆ ಭೌತವಿಜ್ಞಾನ, 2.30 ರಿಂದ 3.50ರವರೆಗೆ ರಸಾಯನ ವಿಜ್ಞಾನ (ಎಲ್ಲದಕ್ಕೂ ತಲಾ60 ಅಂಕ) ನಡೆಯಲಿದೆ.

ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ 24ರಂದು ಬೆಳಿಗ್ಗೆ 11.30ರಿಂದ 12.30ರವರೆಗೆ ಕನ್ನಡ ಭಾಷಾ ಪರೀಕ್ಷೆ (50 ಅಂಕ) ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್‌ ಕೋರ್ಸ್‌ ಮಾಡಲು ಬಯಸುವವರು ‘ನೀಟ್‌’ ಪರೀಕ್ಷೆ, ಆರ್ಕಿಟೆಕ್ಚರ್‌ ಕೋರ್ಸ್‌ ಬಯಸುವವರು ‘ನಾಟಾ’ ಪರೀಕ್ಷೆ ಬರೆಯಬೇಕು. ಮಾಹಿತಿಗೆ http://kea.kar.nic.in.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT