ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಚ್‌.ಡಿ ಪ್ರವೇಶಕ್ಕೆ ಸಿಇಟಿ

Published 29 ಜನವರಿ 2024, 16:25 IST
Last Updated 29 ಜನವರಿ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿನ ಪಿಎಚ್‌.ಡಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ವೃತ್ತಿಪರ ಕೋರ್ಸ್‌ಗಳಿಗೆ ನಡೆಸುವ ಸಿಇಟಿ ಮಾದರಿಯಲ್ಲಿ ಏಕ ರೀತಿಯ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಿ, ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ಎಲ್ಲ ವಿಶ್ವವಿದ್ಯಾಲಯಗಳಿಗೂ ಸೀಟು ಹಂಚಿಕೆ ಮಾಡಲು ಯೋಜನೆ ರೂಪಿಸಲಾಗಿದೆ. ಆಯಾ ವಿಶ್ವವಿದ್ಯಾಲಯಗಳಲ್ಲಿ ಓದಿದವರಿಗೆ ಒಂದಷ್ಟು ಸೀಟುಗಳನ್ನು ಮೀಸಲಿಡಲಾಗುತ್ತಿದೆ. ಇದಕ್ಕೆ ಅನುಮತಿ ಕೋರಿ ಉನ್ನತ ಶಿಕ್ಷಣ ಇಲಾಖೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಮ್ಮತಿ ಸೂಚಿಸಿದ್ದಾರೆ ಎಂದು ಮೂಲಗಳು ಹೇಳಿವೆ.

‘ಪ್ರತಿ ವಿಶ್ವವಿದ್ಯಾನಿಲಯದಲ್ಲೂ ಆಯಾ ವಿಭಾಗಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿವೆ. ಇದರಿಂದ ಭ್ರಷ್ಟಾಚಾರ, ಸ್ವಜನ ಪಕ್ಷಪಾತಕ್ಕೆ ದಾರಿಯಾಗಿದೆ ಎಂಬ ಆರೋಪಗಳು ಪದೇ ಪದೇ ಎದುರಾಗುತ್ತಿರುವುದರಿಂದ ಇಲಾಖೆ ಇಂತಹ ಕ್ರಮಕ್ಕೆ ಮುಂದಾಗಿದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

‘ಸಿಇಟಿ ಮೂಲಕ ಪಿಎಚ್‌.ಡಿ ಸೀಟು ಹಂಚಿಕೆ ಮಾಡಿದರೆ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಸ್ವಾಯತ್ತೆಗೆ ಧಕ್ಕೆಯಾಗುತ್ತದೆ. ಸರ್ಕಾರ ಇಂತಹ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು’ ಎಂದು ಕುಲಪತಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT