ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏ.18ಕ್ಕೆ ಬದಲು ಏ.15ರಂದು (ಮಂಗಳವಾರ) ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಏಪ್ರಿಲ್ 18ರಂದು ‘ಶುಭ ಶುಕ್ರವಾರ’ ಇರುವುದರಿಂದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಬೇಕೆಂದು
ಮನವಿಗಳು ಬಂದಿದ್ದವು. ಹೀಗಾಗಿ, ಸರ್ಕಾರದ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರು, ಮಂಗಳೂರು, ವಿಜಯಪುರ, ಬೆಳಗಾವಿ ಕೇಂದ್ರಗಳಲ್ಲಿ ಮಾತ್ರ ಅಂದು ಬೆಳಿಗ್ಗೆ 10.30ರಿಂದ 11.30ರವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ಸಿಇಟಿ- 25ರ ಉಳಿದ ಪರೀಕ್ಷೆಗಳು ನಿಗದಿಯಂತೆ ಏ. 16 ಮತ್ತು 17ರಂದು ನಡೆಯಲಿವೆ. ಸದ್ಯದಲ್ಲೇ ಪ್ರವೇಶ ಪತ್ರ ಡೌನ್ಲೋಡ್ಗೂ ಅವಕಾಶ ನೀಡಲಾಗುವುದು. ವೇಳಾಪಟ್ಟಿಗೆ ಪ್ರಾಧಿಕಾರದ ವೆಬ್ಸೈಟ್ ನೀಡಬಹುದು ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.