ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಇಟಿ: ಅಂಗವಿಕಲರಿಗೆ ವೈದ್ಯಕೀಯ ತಪಾಸಣೆ

Published 4 ಜೂನ್ 2024, 16:15 IST
Last Updated 4 ಜೂನ್ 2024, 16:15 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಅಂಗವಿಕಲ ಕೋಟಾದಲ್ಲಿ ಮೀಸಲಾತಿ ಬಯಸಿರುವ ಅಭ್ಯರ್ಥಿಗಳಿಗೆ ಜೂನ್‌ 10ರಿಂದ 12ರವರೆಗೆ ವೈದ್ಯಕೀಯ ತಪಾಸಣೆ ನಡೆಯಲಿದೆ.

ಮಲ್ಲೇಶ್ವರದ ಕೆಇಎ ಕಚೇರಿಯಲ್ಲಿ ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡುವರು. 783 ಅಭ್ಯರ್ಥಿಗಳು ಅಂಗವಿಕಲ ಕೋಟಾದಲ್ಲಿ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂರು ದಿನ ತಪಾಸಣೆ ನಡೆಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಮಾಹಿತಿ ನೀಡಿದ್ದಾರೆ.

ತಪಾಸಣೆಗೆ ಹಾಜರಾಗಬೇಕಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅವರ ಹೆಸರಿನ ಮುಂದೆ ಸೂಚಿಸಿದ ದಿನ ವೈದ್ಯಕೀಯ ತಪಾಸಣೆಗೆ ಹಾಜರಾಗಬೇಕು. ಸಿಇಟಿ ಅರ್ಜಿಯ ಪ್ರತಿ, ಪ್ರವೇಶ ಪತ್ರ, ಅಭ್ಯರ್ಥಿಯ ಭಾವಚಿತ್ರ ಇರುವ ಗುರುತಿನ ಚೀಟಿ, ವೈದ್ಯಕೀಯ ಪ್ರಮಾಣಪತ್ರ, ಕಿವುಡುತನದ ಸಮಸ್ಯೆ ಇರುವ ವಿದ್ಯಾರ್ಥಿಗಳು ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರಗಳನ್ನು ತರಬೇಕು. ವೈದ್ಯಕೀಯ ಸಮಿತಿ ನಿರ್ಧಾರವೇ ಅಂತಿಮ  ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT