ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ–ನೀಟ್‌: ಹಿಂಪಡೆಯದ ಶುಲ್ಕ ₹6 ಕೋಟಿ

ಬ್ಯಾಂಕ್ ಖಾತೆ ವಿವರ ಸಲ್ಲಿಸಲು ಏ.10 ಕೊನೆಯ ದಿನ
Published 1 ಏಪ್ರಿಲ್ 2024, 16:25 IST
Last Updated 1 ಏಪ್ರಿಲ್ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ  ಸಂದಾಯ ಮಾಡಿದ್ದ ಹೆಚ್ಚುವರಿ ಶುಲ್ಕ (ಕಾಷನ್ ಡೆಪಾಸಿಟ್‌) ವಾಪಸ್ ಪಡೆಯಲು ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಏ.10ರ ಒಳಗೆ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೂಚಿಸಿದೆ.

ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಮೊತ್ತ ಜಮೆ ಮಾಡಿರುವ ಹಾಗೂ ವಿವಿಧ ಹಂತಗಳಲ್ಲಿ ಸೀಟುಗಳನ್ನು ರದ್ದುಪಡಿಸಿಕೊಂಡ ಅಭ್ಯರ್ಥಿಗಳು ಶುಲ್ಕ ಮರುಪಾವತಿ ಪಡೆಯಲು ಅರ್ಹರಿರುತ್ತಾರೆ. ಬ್ಯಾಂಕ್‌ ಖಾತೆ ವಿವರ ಸರಿ ಇದ್ದವರ ಖಾತೆಗಳಿಗೆ ನೇರವಾಗಿ ಹಣ ವರ್ಗವಾಗಿದೆ. ಇನ್ನೂ ಸುಮಾರು 1,800 ಅಭ್ಯರ್ಥಿಗಳ ಬ್ಯಾಂಕ್ ಖಾತೆ ವಿವರಗಳು ಲಭ್ಯವಾಗಿಲ್ಲ ಎಂದಿದ್ದಾರೆ.

2022 ಹಾಗೂ 2023ನೇ ಸಾಲಿನ 1,436 ಎಂಜಿನಿಯರಿಂಗ್‌ ಹಾಗೂ 324 ವೈದ್ಯಕೀಯ ವಿದ್ಯಾರ್ಥಿಗಳಿಗೆ ಸುಮಾರು ₹6 ಕೋಟಿ ಹಣ ವಾಪಸ್‌ ಜಮೆ ಮಾಡಬೇಕಿದೆ. 

ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶ ಪಡೆದ ಅಭ್ಯರ್ಥಿಗಳೂ ತಮ್ಮ ಹೆಚ್ಚುವರಿ ಶುಲ್ಕ ವಾಪಸ್‌ ಪಡೆಯಬಹುದು ಎಂದು ಕೆಇಎ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT