ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಇಟಿ: 12ನೇ ತರಗತಿ ಅಂಕ ದಾಖಲು ಆರಂಭ

Published 13 ಮೇ 2024, 16:31 IST
Last Updated 13 ಮೇ 2024, 16:31 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ 12ನೇ ತರಗತಿ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ದಾಖಲಿಸಲು ಮೇ 20ರವರೆಗೆ ಅವಕಾಶ ನೀಡಲಾಗಿದೆ. 

ಮೇ 14ರಿಂದ 20ರವರೆಗೆ ಆನ್‌ಲೈನ್‌ ಪೋರ್ಟಲ್‌ ಮೂಲಕ ಅಂಕಗಳನ್ನು ದಾಖಲಿಸಬಹುದು. ನಿಗದಿತ ಲಿಂಕ್‌ನಲ್ಲಿ ಅಂಕಗಳನ್ನು ದಾಖಲಿಸಿ, ಅಂಕಪಟ್ಟಿಯ ಪಿಡಿಎಫ್‌ ಪ್ರತಿಯನ್ನು ತಪ್ಪದೆ ಅಪ್‌ಲೋಡ್ ಮಾಡಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.  

2024ಕ್ಕಿಂತ ಹಿಂದಿನ ವರ್ಷಗಳಲ್ಲಿ ದ್ವಿತೀಯ ಪಿಯು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳೂ ಅಂಕಗಳನ್ನು ದಾಖಲಿಸಬೇಕು. ಪ್ರಸಕ್ತ ವರ್ಷ ತೇರ್ಗಡೆಯಾದ ಪಿಯು ವಿದ್ಯಾರ್ಥಿಗಳ ಅಂಕಗಳನ್ನು ಪ್ರಾಧಿಕಾರ ನೇರವಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಪಡೆದುಕೊಳ್ಳುತ್ತದೆ.  

ವಾಸ್ತುಶಿಲ್ಪ (ಆರ್ಕಿಟೆಕ್ಚರ್‌) ಕೋರ್ಸುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳು 2024 ‘ನಾಟಾ’ ಪರೀಕ್ಷೆಯ ಅಂಕಗಳನ್ನು ಅರ್ಹತೆಗೆ ಅನುಗುಣವಾಗಿ ದಾಖಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT