ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಕೆಲ ಕೇಂದ್ರಗಳಲ್ಲಿ ಜನಿವಾರ ಹಾಗೂ ಹಿಜಾಬ್ ತೆಗೆಸಿದ್ದರಿಂದ ಮಾನಸಿಕವಾಗಿ ಕುಗ್ಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ನೀಡುವ ಕುರಿತು ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ವಸ್ತ್ರಸಂಹಿತೆ ಗೊಂದಲಗಳು ಮೂರು ಪರೀಕ್ಷಾ ಕೇಂದ್ರಗಳಲ್ಲಿ ವರದಿಯಾಗಿವೆ. ನಾಲ್ವರು ವಿದ್ಯಾರ್ಥಿಗಳಿಗೆ ಜನಿವಾರ, ಒಂದು ಪ್ರಕರಣದಲ್ಲಿ ಹಿಜಾಬ್ ತೆಗೆಸಲು ಹೇಳಿದ ಕಾರಣ ವಿದ್ಯಾರ್ಥಿಗಳು ಪರೀಕ್ಷೆ ಸರಿಯಾಗಿ ಬರೆಯಲು ಸಾಧ್ಯವಾಗಿಲ್ಲ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮರುಪರೀಕ್ಷೆ ಅವಕಾಶ ನೀಡಲಾಗಿತ್ತು. ಆದರೆ, ಕೃಪಾಂಕ ನೀಡುವುದು ಕಾನೂನು ಸಮಸ್ಯೆ ತರುತ್ತದೆ. ವಿದ್ಯಾರ್ಥಿಗಳು ಮರುಪರೀಕ್ಷೆ ಬಯಸಿದರೆ ಸರ್ಕಾರ ಅದನ್ನು ಪರಿಗಣಿಸುತ್ತದೆ ಎಂದರು.

ಧಾರ್ಮಿಕ ಗುರುತುಗಳಿದ್ದರೆ ವಿದ್ಯಾರ್ಥಿಗಳು ಎರಡು ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಬರುವಂತೆ ಸೂಚನೆ ನೀಡಲಾಗಿತ್ತು. ಸಿಬ್ಬಂದಿಗೂ ತರಬೇತಿ ನೀಡಲಾಗಿತ್ತು. ಆದರೂ ಬೆಂಗಳೂರಿನ ಕೃಪಾನಿಧಿ ಪಿಯು ಕಾಲೇಜು, ನಾಗಾರ್ಜುನ ಕಾಲೇಜುಗಳಲ್ಲಿ ಜನಿವಾರ ಹಾಗೂ ಚಿಕ್ಕಬಳ್ಳಾಪುರದ ಬಿಜಿಎಸ್ ಕಾಲೇಜಿನಲ್ಲಿ ಹಿಜಾಬ್ ತೆಗೆಸಿದ್ದಾರೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.