ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಮೇ 22 ಅಥವಾ 23ರಂದು ಪ್ರಕಟವಾಗಲಿದೆ.

ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಏ.16ರಂದು ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ, ಏ.17ರಂದು ಗಣಿತ ಮತ್ತು ಜೀವ ವಿಜ್ಞಾನ ವಿಷಯಗಳ ಪರೀಕ್ಷೆಗಳನ್ನು 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 3.11 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ದ್ವಿತೀಯ ಪಿಯು ಪರೀಕ್ಷೆ–1 ಮತ್ತು ಪರೀಕ್ಷೆ–2, ಸಿಬಿಎಸ್ಇ, ಐಸಿಎಸ್ಇ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಅಭ್ಯರ್ಥಿಗಳು ಪಡೆದ ಅಂಕಗಳ ಕೂಡುವಿಕೆ ಕಾರ್ಯವನ್ನು ಕೆಇಎ ಪೂರ್ಣಗೊಳಿಸಿದೆ.

ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ. 15ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. 1,958 ಅಭ್ಯರ್ಥಿಗಳು ಹಾಜರಾಗಿದ್ದರು. ಅವರಲ್ಲಿ ಹೆಚ್ಚಿನವರು ಕೇರಳದ ವಿದ್ಯಾರ್ಥಿಗಳು. ಈ ವಿದ್ಯಾರ್ಥಿಗಳ ಪಿಯು ಫಲಿತಾಂಶವನ್ನು ಕೇರಳ ಪದವಿಪೂರ್ವ ಶಿಕ್ಷಣ ಇಲಾಖೆ ಇದೇ ಮೇ 21ರಂದು ಪ್ರಕಟಿಸಲಿದೆ. ಫಲಿತಾಂಶ ಪ್ರಕಟವಾದ ಒಂದು ಅಥವಾ ಎರಡು ದಿನಗಳಲ್ಲಿ ಸಿಇಟಿ ರ್ಯಾಂಕಿಂಗ್ ಬಿಡುಗಡೆ ಮಾಡಲು ಕೆಇಎ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.