ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಾಂಡಾ, ಆದಿಜಾಂಬವ ನಿಗಮಗಳಿಗೆ ಅಧ್ಯಕ್ಷರ ನೇಮಕ

Published 24 ಜೂನ್ 2024, 16:25 IST
Last Updated 24 ಜೂನ್ 2024, 16:25 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದಾವಣಗೆರೆಯ ಎನ್‌. ಜಯದೇವನಾಯ್ಕ ಮತ್ತು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಚಿತ್ರದುರ್ಗದ ಜಿ.ಎಸ್‌. ಮಂಜುನಾಥ್‌ ಅವರನ್ನು ನೇಮಿಸಿ ಸಮಾಜ ಕಲ್ಯಾಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಹಲವು ಜಾತಿವಾರು ನಿಗಮಗಳಿಗೆ ಹಿಂದೆಯೇ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಆದರೆ, ತಾಂಡಾ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ ಸೇರಿದಂತೆ ಕೆಲವು ನಿಗಮಗಳ ಅಧ್ಯಕ್ಷರ ನೇಮಕಾತಿ ಬಾಕಿ ಇತ್ತು. ಆಯಾ ಇಲಾಖೆಗಳ ಉಸ್ತುವಾರಿ ಹೊಂದಿರುವ ಸಚಿವರೇ ಪದನಿಮಿತ್ತ ಅಧ್ಯಕ್ಷರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT