ಬೆಂಗಳೂರು: ‘ಮುಸಲ್ಮಾನ ಹುಡುಗಿ ಯರು ಗಂಡಸರಿಗಿಂತ ಡೇಂಜರ್, ಅವರ ಸ್ನೇಹ ಮಾಡಲೇಬೇಡಿ...’ ಎಂಬ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

‘ನನ್ನ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ತಡೆ ನೀಡಬೇಕು’ ಎಂದು ಕೋರಿ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್ ಮಿಥುನ್ ಚಕ್ರವರ್ತಿ ದೇವಿದಾಸ್ ಶೇಟ್ (47) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಸಂಜೀವ್ ಕುಮಾರ್ ಹಂಚಾಟೆ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ (ಧಾರವಾಡ) ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯವು ಸಂವಿಧಾನದ 19ನೇ ವಿಧಿಯ ವ್ಯಾಪ್ತಿಯೊಳಗೇ ಇದೆ. ಭಾರತೀಯ ನ್ಯಾಯ ಸಂಹಿತೆಯ ಕಲಂ 196 ಅನ್ವಯ ಆಗುವುದಿಲ್ಲ. ದೂರು ನೀಡಿರುವ ಪೊಲೀಸ್ ಕಾನ್ಸ್ಟೆಬಲ್ ಬಾಧಿತರಲ್ಲ. ಅವರಿಗೆ ಆ ಹಕ್ಕೂ ಇಲ್ಲ’ ಎಂದು ಪ್ರತಿಪಾದಿಸಿದರು.

‘ಇದು ಮೇಲ್ನೋಟಕ್ಕೆ ತಡೆ ನೀಡುವ ಪ್ರಕರಣವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ ವಿಚಾರಣೆಗೆ ತಡೆ ನೀಡಿತು.

ಪ್ರಕರಣ: ಧಾರವಾಡದ ಸುಭಾಷ್ ರಸ್ತೆಯಲ್ಲಿ ಇದೇ ವರ್ಷದ ಏಪ್ರಿಲ್ 8ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಧಾರವಾಡ ಶಹರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-35-2044116358

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.