ಬೆಂಗಳೂರು: ‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಗುದ್ದಾಟದಲ್ಲಿ ರಾಜ್ಯದಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಎಳ್ಳುನೀರು ಬಿಟ್ಟಿದ್ದಾರೆ’ ಎಂದು ವಿಧಾನಪರಿತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಐದು ವರ್ಷವೂ ನಾನೇ ಮುಖ್ಯಮಂತ್ರಿ, 2028ರ ನಂತರವೂ ನಾನೇ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಹಾಕಿದ್ದ ಟವಲ್ಲೇ ನಾಪತ್ತೆಯಾಗಿದೆ. ಅವರು ಮುಖ್ಯಮಂತ್ರಿಯಾಗುವುದು ಅನುಮಾನ. ರಾಜಣ್ಣ ಅವರ ಸೆಪ್ಟಂಬರ್ ಕ್ರಾಂತಿ, ಶಿವಕುಮಾರ್ ಬೆಂಬಲಿಗರ ಮುಂದಿನ ಮುಖ್ಯಮಂತ್ರಿ ಹೇಳಿಕೆ ಜನರಲ್ಲಿ ಗೊಂದಲ ಮೂಡಿಸುತ್ತಿವೆ. ರಾಜ್ಯ ಕಾಂಗ್ರೆಸ್ನ ಕೋಮಾ ಸ್ಥಿತಿ ಆ ಪಕ್ಷದ ಹೈಕಮಾಂಡ್ಗೂ ಗೊತ್ತಿಗೆ. ಅದಕ್ಕಾಗಿ ಸಿದ್ದರಾಮಯ್ಯ ಬದಲಿಸುವ ಧೈರ್ಯ ಮಾಡುತ್ತಿಲ್ಲ’ ಎಂದರು.

ಪರಿಶಿಷ್ಟ ಜಾತಿ, ವರ್ಗಗಳಿಗೆ ಮೀಸಲಿಟ್ಟ ಹಣ ಸಂಪೂರ್ಣ ವ್ಯರ್ಥವಾಗಿದೆ. 2025–26ನೇ ಸಾಲಿನಲ್ಲಿನ ಒಂದು ರೂಪಾಯಿಯೂ ಬಿಡುಗಡೆ ಆಗಿಲ್ಲ. ಗ್ಯಾರಂಟಿ ಯೋಜನೆಗಳು ಸಕಾಲದಲ್ಲಿ ಫಲಾನುಭವಿಗಳನ್ನು ತಲುಪುತ್ತಿಲ್ಲ. ಉದ್ಯೋಗ ಖಾತ್ರಿ ಕೆಲಸಕ್ಕೆ ಕೂಲಿ ಸಿಗುತ್ತಿಲ್ಲ. ಸಮರ್ಪಕ ಆಡಳಿತ ನೀಡಲು ವಿಫಲವಾಗಿರುವ ರಾಜ್ಯ ಸರ್ಕಾರ, ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಆಪಾದನೆ ಮಾಡುತ್ತಿದೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.