ಚಳ್ಳಕೆರೆ: ‘ನಾನು ಶಾಸಕನಾಗಿ ಆಯ್ಕೆಯಾಗಿನಿಂದ ನಮ್ಮ ನಡುವೆ ಒಳ್ಳೆಯ ಸಂಬಂಧ ಇತ್ತು. ಅವರನ್ನು ಮರೆಯಲು ಆಗುತ್ತಿಲ್ಲ’ ಎಂದು ಡಿ. ಸುಧಾಕರ್ ಅವರನ್ನು ನೆನೆದು ಶಾಸಕ ಟಿ. ರಘುಮೂರ್ತಿ ಭಾವುಕರಾದರು.

ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಶನಿವಾರ ಚಳ್ಳಕೆರೆ ಹಾಗೂ ಪರುಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರ ನುಡಿ– ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಮ್ಮ ನಡುವೆ ಸಾಕಷ್ಟು ರಾಜಕೀಯ ಭಿನ್ನಾಭಿಪ್ರಾಯಗಳಿದ್ದವು. ಆದರೆ, ಎಂದಿಗೂ ಅವರ ಜೊತೆ ಸಂಬಧ ಕೆಡಿಸಿಕೊಂಡಿಲ್ಲ. ಅವರು ರಾಜಕೀಯದಲ್ಲಿ ಹಿರಿಯರಾಗಿದ್ದರು. 1 ಬಾರಿ ಚಳ್ಳಕೆರೆಯಿಂದ, 3 ಬಾರಿ ಹಿರಿಯೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. ರಾಜಕೀಯದಲ್ಲಿ ಬೆಳೆಯಬೇಕು ಎಂದರೆ ಜಾತಿಯೂ ಬಹಳ ಮುಖ್ಯ ಆಗುತ್ತದೆ. ಆದರೆ, ಅವರು ಕ್ಷೇತ್ರದ ಎಲ್ಲಾ ಜನರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದರು. ಜೊತೆಗೆ ಅವರ ಅಭಿವೃದ್ಧಿ ಕೆಲಸಗಳನ್ನು ಕಂಡು ಜನರೇ ಆಶೀರ್ವಾದ ಮಾಡಿದ್ದರು ಎಂದರು.

ಸುಧಾಕರ್ ಅವರಿಗೆ 224 ಕ್ಷೇತ್ರದ ಶಾಸಕರ ಪರಿಚಯವೂ ಇತ್ತು. ಜೊತೆಗೆ ಹಾಸ್ಯಮಯ ವ್ಯಕ್ತಿತ್ವದಿಂದಲೇ ಜನರ ಮನಸ್ಸನ್ನು ಗೆಲ್ಲುತ್ತಿದ್ದರು. ಅಂತ ವ್ಯಕ್ತಿಗೆ ಈ ರೀತಿಯ ಸಾವು ಬಂದಿದ್ದು ಯಾರೂ ನಂಬಲು ಸಾಧ್ಯವಾಗಲಿಲ್ಲ. ಅವರಿಗೆ ಮೊಣಕಾಲು ನೋವು ಜಾಸ್ತಿಯಾಗಿತ್ತು. ಆದರೆ ಅದನ್ನು ಮುಂದೂಡಿಕೊಂಡು ಬಂದಿದ್ದರು ಎಂದು ತಿಳಿಸಿದರು.

ಮಾಜಿ ಸಚಿವ ಎಚ್. ಆಂಜನೇಯ, ಶಾಸಕರಾದ ಕೆ.ಸಿ. ವೀರೇಂದ್ರ ಪಪ್ಪಿ, ಎನ್.ವೈ. ಗೋಪಾಲಕೃಷ್ಣ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ. ತಾಜ್ಪೀರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ತಾಲ್ಲೂಕು ಘಟಕದ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಜಿ.ಟಿ ಶಶಿಧರ್, ವೀರಭದ್ರಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-44-532451424

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.