ಶ್ರೀರಂಗಪಟ್ಟಣ: ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲು ನಿರಾಕರಿಸಿ ಪ್ರಸಕ್ತ ಲೋಕಸಭಾ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿರುವ ಕಾಂಗ್ರೆಸ್ ಮುಖಂಡರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಪಟ್ಟಣದಲ್ಲಿ ಚರ್ಚೆ ನಡೆಸಿದರು.

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದ ಸಮಯದಲ್ಲೇ ಇಲ್ಲಿನ ಹೋಟೆಲ್‌ನಲ್ಲಿ ಇಬ್ಬರು ಅರ್ಧ ಗಂಟೆ ಚರ್ಚೆ ನಡೆಸಿದ್ದು ಮಹತ್ವ ಪಡೆದುಕೊಂಡಿದೆ. ಸುಮಲತಾಗೆ ಪರೋಕ್ಷ ಬೆಂಬಲ ನೀಡಿದ್ದು, ಮಂಡ್ಯದ ಸ್ವಾಭಿಮಾನಿ ಸಮಾವೇಶದ ಯಶಸ್ಸಿನ ಬಗ್ಗೆ ಈ ಇಬ್ಬರೂ ಮುಖಂಡರು ತಮ್ಮ ಆಪ್ತರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದರು.

ಮನ್‌ಮುಲ್ ನಿರ್ದೇಶಕ ಬಿ.ಬೋರೇಗೌಡ, ಗುತ್ತಿಗೆದಾರ ಜಿ.ಎಲ್.ಲಕ್ಷ್ಮೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬಿ.ಎಸ್.ರಾಮಚಂದ್ರು ಜತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.