ಚಾಮರಾಜನಗರ: ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ಹಾಗೂ ಮೈಸೂರಿನ ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮುಂದಾಳತ್ವದಲ್ಲಿ ಈಚೆಗೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ, ಬಲಗೈ ಸಮುದಾಯಕ್ಕೆ ಸೇರಿದ ಸಚಿವರು ಭಾಗವಹಿಸದಿರುವುದು ಖಂಡನೀಯ ಎಂದು ಡಾ.ಬಿ.ಆರ್.ಅಂಬೇಡ್ಕರ್ ಮಹಾಸಭಾ ಕಾರ್ಯಾಧ್ಯಕ್ಷ ಸಿ.ಕೆ.ಮಂಜುನಾಥ್ ಆರೋಪಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾರದಿರುವುದು ಬೇಸರದ ವಿಚಾರ ಎಂದು ಹೇಳಿದರು.

ಸಮುದಾಯ ಶ್ರೀಗಳು ಸಹಿತ ಮುಖಂಡರು ಮನವಿ ಮಾಡಿದ್ದರೂ ನೆಪಕ್ಕೆ ಇಬ್ಬರು ಸಚಿವರು ಹಾಜರಾಗಿ ಪ್ರತಿಭಟನಾ ಸ್ಥಳಕ್ಕೆ ಬಾರದೆ ಮನವಿ ಸ್ವೀಕರಿಸಿದ್ದಾರೆ ಆಗಮಿಸದಿರುವುದು ಬೇಸರ ತಂದಿದೆ. ಅಸ್ಪೃಶ್ಯತೆಯ ನೋವು ಗೊತ್ತಿಲ್ಲದ ಸಚಿವರಾದ ಪ್ರಿಯಾಂಕಾ ಖರ್ಗೆ, ಡಾ.ಜಿ.ಪರಮೇಶ್ವರ್, ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ಮೀಸಲಾತಿಯ ಮಹತ್ವದ ಅರಿವಿಲ್ಲ ಎಂದು ಆರೋಪಿಸಿದರು.

ಒಳ ಮೀಸಲಾತಿಯಿಂದ ಪರಿಶಿಷ್ಟ ಜಾತಿಯ ಬಲಗೈ, ಎಡಗೈ ಸಮುದಾಯಗಳ ನಡುವೆ ಕಂದಕ ಸೃಷ್ಟಿಯಾಗಿದೆ. ಮುಖ್ಯಮಂತ್ರಿಗಳು ಆರಂಭದಲ್ಲೇ ಸಮಸ್ಯೆ ಪರಿಹರಿಸಬಹುದಿತ್ತು, 101 ಜಾತಿಗಳಿಗೆ ಸಮನಾಗಿ ಮೀಸಲಾತಿ ನೀಡಬಹುದಿತ್ತು. ಒಳ ಮೀಸಲಾರಿ ಜಾರಿ ಪ್ರಕ್ರಿಯೆ ಸಮುದಾಯದ ಸಚಿವರಿಗೆ ತಿಳಿದಿರಲಿಲ್ಲವೇ ಎಂದು ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮೂಡ್ನಾಕೂಡು ಪ್ರಕಾಶ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶಿವಸ್ವಾಮಿ, ರಮೇಶ್, ಸಿದ್ದರಾಜು, ರಾಮಸಮುದ್ರ ಬಾಬು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-37-275323532

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.