ಚಾಮರಾಜನಗರ: ಸಚಿವ ಸಂಪುಟ ಪುನಾರಚನೆ ವೇಳೆ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ವಕೀಲ ಆರ್.ಅರುಣ್ ಕುಮಾರ್ ಒತ್ತಾಯಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ರಾಜಕೀಯದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ದನಿ ಎತ್ತುತ್ತಲೇ ಬಂದಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಟ್ ಕಾಯಿನ್ ಹಗರಣ, ಪಿಎಸ್ಐ ನೇಮಕಾತಿ ಹಗರಣ, ಶೇ 40 ಕಮಿಷನ್ ಆರೋಪ, ಕೋವಿಡ್ ಅವಧಿಯ ಅವ್ಯವಹಾರ ಹಾಗೂ ಗಂಗಾ ಕಲ್ಯಾಣ ಯೋಜನೆಯ ಅಕ್ರಮ ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿಯ ಬಣ್ಣ ಬಯಲು ಮಾಡಿದ್ದರು. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ್ದರು.

ಮೂರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಪ್ರಿಯಾಂಕ್ ಖರ್ಗೆಗೆ ಆಡಳಿತಾತ್ಮಕ ಅನುಭವ ಇದೆ, ವಹಿಸಿದ ಇಲಾಖೆಯಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಬಾರಿ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ವಕೀಲರಾದ ನಾಗಾರ್ಜುನ್, ಪೃಥ್ವಿ, ನಾಗಮ್ಮ, ಎನ್ಎಸ್ಯುಐ ಜಿಲ್ಲಾಧ್ಯಕ್ಷ ಮೋಹನ್ ನಗು, ಮುಖಂಡರಾದ ಕುಮಾರನಾಯ್ಕ, ರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-37-881808447

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.