ಸಂತೇಮರಹಳ್ಳಿ: ಒಳ ಮೀಸಲಾತಿ ಹೆಸರಿನಲ್ಲಿ ಪರಿಶಿಷ್ಟ ಜಾತಿಗಳನ್ನು ಕಾಂಗ್ರೆಸ್ ಸರ್ಕಾರ ಒಡೆದು ಆಳುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ ಆರೋಪಿಸಿದರು.

ಇಲ್ಲಿನ ಬಯಲು ರಂಗಮಂದಿರಲ್ಲಿ ಬಹುಜನ ಸಮಾಜ ಪಕ್ಷದಿಂದ ಮಂಗಳವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಹಾಗೂ ಬಹುಜನ ಸಮಾಜ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.‘ಕಾಂಗ್ರೆಸ್, ಬಿಜೆಪಿ ಹಾಗೂ ಜನತಾದಳದಂತಹ ಮನುವಾದಿ ಪಕ್ಷಗಳು; ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಈ ಪಕ್ಷಗಳಿಗೆ ಬೇಕಾಗಿಲ್ಲ. ಈ ಸಮುದಾಯಗಳ ಒಗ್ಗಟ್ಟನ್ನು ಒಡೆದು ಆಡಳಿತ ನಡೆಸುವ ಮೂಲಕ ಕೇವಲ ಮತ ಬ್ಯಾಂಕ್ಗಳನ್ನಾಗಿ ಮಾಡಿಕೊಂಡಿವೆ. ಇದರ ಫಲವಾಗಿ ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಸಮುದಾಯಗಳು ಬೀದಿಯಲ್ಲಿ ನಿಂತು ಕಚ್ಚಾಡುವಂತೆ ಮಾಡಿದ್ದಾರೆ. ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ಒಗ್ಗಟ್ಟಾದರೆ ಈ ದೇಶ ಆಳುತ್ತಾರೆ. ಅವರನ್ನು ಎಂದಿಗೂ ಒಗ್ಗಟ್ಟಾಗಲು ಬಿಡಬಾರದು ಎಂಬ ಉದ್ದೇಶದಿಂದ ಹಿಂದುಳಿದ ಜಾತಿಗಳಲ್ಲಿ ಕಲಹ ಉಂಟು ಮಾಡುತ್ತಿದ್ದಾರೆ’ ಎಂದರು.‘ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ಕಟ್ಟಿದ 10 ವರ್ಷಗಳಲ್ಲಿ ಆಡಳಿತಕ್ಕೆ ಬಂದು ದಲಿತ ನಾಯಕಿ ಮಾಯವತಿ ಅವರು ಮುಖ್ಯಮಂತ್ರಿಯಾದರು. ನೂರು ವರ್ಷ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಒಬ್ಬ ದಲಿತನನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಾಗಿಲ್ಲ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ದಲಿತರಿಗೆ ಅಧಿಕಾರದ ಅವಕಾಶ ನೀಡುವುದಿಲ್ಲ. ಬಹುಜನ ಸಮಾಜ ಪಕ್ಷದಿಂದ ಮಾತ್ರ ಈ ಸಮುದಾಯಗಳು ಅಧಿಕಾರಕ್ಕೇರಲು ಸಾಧ್ಯ. ಅಧಿಕಾರವನ್ನು ನೀಡಬೇಕಾಗಿರುವ ಹಿಂದುಳಿದ ವರ್ಗದವರು ಅಧಿಕಾರವನ್ನು ಹೋರಾಟದ ಮೂಲಕ ಕೇಳುವಂತಾಗಿದೆ’ ಎಂದರು.

ದೇಶದಲ್ಲಿ ನಿರ್ದಿಷ್ಟ ಸಮುದಾಯ ಮಾತ್ರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುತ್ತಿದೆ. ಆದರೆ ಹೊರ ಅವರ ಜನ್ಮ ದಿನವನ್ನು ವಿಶ್ವ ಜ್ಞಾನ ದಿನವನ್ನಾಗಿ ಆಚರಿಸುತ್ತಿರುವುದು ಭಾರತೀಯರೆಲ್ಲರೂ ಹೆಮ್ಮೆ ಪಡುವಂತಾಗಿದೆ ಎಂದು ತಿಳಿಸಿದರು. ಬಿಎಸ್ಪಿ ರಾಜ್ಯ ಉಸ್ತುವಾರಿಗಳಾದ ಹ.ರಾ.ಮಹೇಶ್, ಗಂಗಾಧರ್, ಉಪಾಧ್ಯಕ್ಷ ಜಾಮೀರ್ ಹುಸೇನ್, ರಾಧಾಕೃಷ್ಣ, ಕಾಂತಪ್ಪ, ನಾಗೇಶ್, ಸುಧಾ, ಬಸವಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-37-1795098021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.