ಚಾಮರಾಜನಗರ: ರಾಜ್ಯ ಸರ್ಕಾರ ಸಂಘ ಪರಿವಾರವನ್ನು ಸಮಾಧಾನ ಪಡಿಸಲು ದ್ವೇಷ ಭಾಷಣಕಾರರಾದ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲಾ ಸ್ವಾಮಿ ಸೇರಿದಂತೆ ಹಲವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರುವುದು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಪಕ್ಷದ ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹಮದ್ ಮಾತನಾಡಿ, ‘ರಾಜ್ಯ ಸರ್ಕಾರ ಕನ್ನಡಪರ ಹೋರಾಟಗಾರರು, ರೈತರು ಹಾಗೂ ಅಮಾಯಕರ ಮೇಲಿನ ಪ್ರಕರಣಗಳನ್ನು ಹಿಂಪಡೆದಿರುವುದು ಸ್ವಾಗತಾರ್ಹ. ಆದರೆ, ಕೋಮು ದ್ವೇಷ ಹರಡಿ, ಗಲಭೆ ಸೃಷ್ಟಿಸುವವರ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ನಿರ್ಧಾರ ತೆಗೆದುಕೊಂಡಿರುವುದು ಜನತಂತ್ರ ವ್ಯವಸ್ಥೆಗೆ ವಿರುದ್ಧವಾಗಿದೆ’ ಎಂದರು.

‘ಮುಸ್ಲಿಮರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದವರ ವಿರುದ್ಧ ದಾಖಲಾಗಿರುವ ಹಲವು ಪ್ರಕರಣಗಳನ್ನು ಕೈಬಿಡಲು ಕಾನೂನು ತೊಡಕಿನ ನೆಪವೊಡ್ಡಿರುವ ರಾಜ್ಯ ಸರ್ಕಾರ ಕೋಮುವಾದಿಗಳ ಪರ ನಿಂತಿರುವುದು ಖಂಡನೀಯ. ಕೂಡಲೇ ನಿರ್ಧಾರವನ್ನು ಬದಲಿಸಿ ಕಾನೂನಾತ್ಮಕ ಶಿಕ್ಷೆ ಆಗುವಂತೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

‘ಕೆ.ಜಿ ಹಳ್ಳಿ, ಡಿ.ಜೆ. ಹಳ್ಳಿ, ಹುಬ್ಬಳ್ಳಿ ಘಟನೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಅಮಾಯಕರು ಭ್ರಷ್ಟ ಹಾಗೂ ತಾರತಮ್ಯ ವ್ಯವಸ್ಥೆಗೆ ಬಲಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಸಮಾಜದಲ್ಲಿ ದ್ವೇಷ ಭಾಷಣಗಳ ಮೂಲಕ ಅಶಾಂತಿ ಸೃಷ್ಟಿಸುತ್ತಿರುವವರು, ಧರ್ಮದ ಹೆಸರಿನಲ್ಲಿ ಸಮಾಜ ವಿಭಜಿಸುತ್ತಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತಿರುವುದು ಕಾನೂನು ಸುವ್ಯವಸ್ಥೆಗೆ ದೊಡ್ಡ ಸವಾಲಾಗಿದೆ’ ಎಂದರು.

ಜಿಲ್ಲಾಧ್ಯಕ್ಷ ಖಲೀಲ್ ಮಾತನಾಡಿ, ‘ಅಲ್ಪಸಂಖ್ಯಾತರು ಮತ್ತು ದಲಿತರನ್ನು ಗುರಿಯಾಗಿಸಲಾಗುತ್ತಿದ್ದು ರಾಜ್ಯದ ಜನತೆ ಸಹಿಸುವುದಿಲ್ಲ, ಕೋಮುವಾದಿ ಪರ ಸರ್ಕಾರಕ್ಕೆ ಪಾಠ ಕಲಿಸಲಿದ್ದಾರೆ’ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ನಯಾಜ್ ಉಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಎಂ, ನಗರ ಅಧ್ಯಕ್ಷ ಸೈಯದ್ ಇರ್ಫಾನ್, ಜಿಲ್ಲಾ ಕಾರ್ಯದರ್ಶಿ ಜಬಿನೂರ್, ನಗರಸಭಾ ಸದಸ್ಯ ಅಫ್ಸರ್, ಮೊಹಮ್ಮದ್ ಅಮೀಕ್, ಸಂಘಟನಾ ಕಾರ್ಯದರ್ಶಿ ನಸ್ರುಲ್ಲಾ, ಜಿಲ್ಲಾ ಸಮಿತಿ ಸದಸ್ಯರಾದ ಸೈಯದ್ ಆರೀಫ್, ಹೋರಾಟಗಾರ ಸಂಘ ಸೇನಾ, ಬಂಗಾರ ಸ್ವಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-37-657884788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.