ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಿಖಿಲ್‌ ಸ್ಪರ್ಧಿಸಿದರೆ ಸಹಕಾರ: ಯೋಗೇಶ್ವರ

Published 26 ಜೂನ್ 2024, 16:02 IST
Last Updated 26 ಜೂನ್ 2024, 16:02 IST
ಅಕ್ಷರ ಗಾತ್ರ

ನವದೆಹಲಿ: ‘ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ನನ್ನ ಸಂಪೂರ್ಣ ಬೆಂಬಲ ಇದೆ. ಯಾವುದೇ ಒಳಸಂಚು ಮಾಡುವುದಿಲ್ಲ’ ಎಂದು ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.‍ಪಿ.ಯೋಗೇಶ್ವರ ಸ್ಪಷ್ಟಪಡಿಸಿದರು. 

ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಅವರೇ ಬಹುಪಾಲು ನಿರ್ಣಯ ಮಾಡುತ್ತಾರೆ. ಅವರ ಆಶೀರ್ವಾದ ಬೇಕೇಬೇಕು’ ಎಂದರು. 

ಕಾಂಗ್ರೆಸ್ ಪಕ್ಷದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಟುಂಬದವರೇ ನಿಲ್ಲುತ್ತಾರೆ ಎಂಬುದು ನಮ್ಮ ಅಭಿಪ್ರಾಯ. ಡಿಕೆಶಿ ಕುಟುಂಬದವರು ನಿಂತರೆ ದೊಡ್ಡ ಹೋರಾಟ ನಡೆಯಲಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT