ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ ಚುನಾವಣೆ | ಚನ್ನಪಟ್ಟಣಕ್ಕೆ ಅಚ್ಚರಿಯ ಅಭ್ಯರ್ಥಿ: ಕುಮಾರಸ್ವಾಮಿ

Published 6 ಜುಲೈ 2024, 15:26 IST
Last Updated 6 ಜುಲೈ 2024, 15:26 IST
ಅಕ್ಷರ ಗಾತ್ರ

ಬೆಂಗಳೂರು: ‘ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್‌ ಕುರಿತು ನಿರ್ಧಾರವಾಗಿಲ್ಲ. ಬಿಜೆಪಿ ನಾಯಕರ ಜತೆ ಚರ್ಚಿಸಿದ ನಂತರ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು’ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಪತ್ನಿ, ತಮ್ಮ ಸಹೋದರಿ ಅನಸೂಯಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಂದಿರುವ ವರದಿಗಳ ಬಗ್ಗೆ ಸ್ಪಷ್ಟನೆ ನೀಡಿದ ಅವರು, ‘ಮೊದಲು ನಿಖಿಲ್‌ ಹೆಸರಿತ್ತು. ಈಗ ಅನಸೂಯಾ ಹೆಸರನ್ನು ಮುನ್ನೆಲೆಗೆ ತಂದಿದ್ದಾರೆ. ಆದರೆ, ಚನ್ನಪಟ್ಟಣದ ಜೆಡಿಎಸ್‌ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಂತಿಮ ನಿರ್ಧಾರ ಮಾಡಲಾಗುವುದು’ ಎಂದರು.

‘ಕುಮಾರಸ್ವಾಮಿ ಗ್ರೀನ್‌ ಸಿಗ್ನಲ್‌ ನೀಡಿದರೆ ಸ್ಪರ್ಧಿಸಲು ಸಿದ್ಧ’ ಎಂಬ ವಿಧಾನ ಪರಿಷತ್‌ನ ಬಿಜೆಪಿಯ ಸದಸ್ಯ ಸಿ.ಪಿ. ಯೋಗೀಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯ ಕೇಂದ್ರ ಹಾಗೂ ರಾಜ್ಯದ ನಾಯಕರು ಈ ಕುರಿತು ನನ್ನೊಂದಿಗೆ ಚರ್ಚಿಸಿಲ್ಲ. ಸ್ವಂತ ಬಲ, ಕಾರ್ಯಕರ್ತರ ಪರಿಶ್ರಮದಿಂದ ಎರಡು ಬಾರಿ ಗೆದ್ದಿದ್ದೇನೆ. ಅದು ಜೆಡಿಎಸ್ ಕ್ಷೇತ್ರವಾಗಿದೆ. ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದ ನಂತರ ನಿರ್ಧಾರ ತೆಗೆದುಕೊಳ್ಳುವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT