ಮಂಗಳೂರು/ ಚಿಕ್ಕಮಗಳೂರು: ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದೇ 7 ಮತ್ತು 8 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಡಲಿನಲ್ಲಿ ತೂಫಾನ್ ಏಳುವ ಸಾಧ್ಯತೆ ಇದ್ದು ಕಡಲಿಗೆ ಮೀನುಗಾರಿಕೆಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ವಿಪರೀತ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ 2, 3 ಹಾಗೂ 7 ನೇ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಏಳನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿದ್ದರಿಂದ ಎರಡು ಗಂಟೆ ಸಂಚಾರ ಸ್ಥಗಿತಗೊಂಡಿತ್ತು. ಉಳ್ಳಾಲ ಮತ್ತು ಸೋಮೇಶ್ವರ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ, ನ್ಯೂ ಉಚ್ಚಿಲ, ಉಳ್ಳಾಲದ ಕಿಲೇರಿಯಾನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಕಡಲ್ಕೊರೆತ ತೀವ್ರವಾಗಿದೆ.

ಸಂಪರ್ಕ ಕಡಿತ: ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸುರಂಬಡ್ಕ ಕಿಂಡಿ ಅಣೆಕಟ್ಟು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹೆಬ್ರಿ ಸಮೀಪದ ಬಂಡಿಮಠ ಬಳಿ ಸೀತಾನದಿ ಉಕ್ಕಿ ಹರಿಯುತ್ತಿದ್ದು, ಉಡುಪಿ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿದುಕೊಂಡಿದೆ.

ರೈಲು ಸಂಚಾರ ವ್ಯತ್ಯಯ: ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಮರ ಬಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಭೂ ಕುಸಿತದಿಂದಾಗಿ ಕಾರವಾರ–ಯಶವಂತಪುರ ರೈಲನ್ನು ಹಾಸನ ಮತ್ತು ಮಂಗಳೂರು ಮಾರ್ಗಮಧ್ಯೆ ರದ್ದುಪಡಿಸಲಾಗಿದೆ.

ದೇಗುಲದಲ್ಲಿ ಸಿಲುಕಿದ್ದ 40 ಮಂದಿಯ ರಕ್ಷಣೆ

ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕಲ್ಹತ್ತಿಗಿರಿ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದ್ದು, ಜಲಪಾತದ ಅಂಗಳದ ವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಸಿಲುಕಿಕೊಂಡಿದ್ದ ಸುಮಾರು 40 ಪ್ರವಾಸಿಗರನ್ನು ಪೊಲೀಸರು, ಸ್ಥಳೀಯರು ಮಂಗಳವಾರ ಹಗ್ಗದ ನೆರವಿನಿಂದ ಪಾರು ಮಾಡಿದ್ದಾರೆ.

‘ಮಧ್ಯಾಹ್ನ 1.30ರಿಂದ ಸುಮಾರು 2 ಗಂಟೆ ಕಾರ್ಯಾಚರಣೆ ಮಾಡಿದೆವು. ಸ್ಥಳೀಯ ಆಟೊ ಚಾಲಕರು ನೆರವಾದರು. ಎಲ್ಲರನ್ನು ಸುರಕ್ಷಿತವಾಗಿ ಕರೆತರಲಾಗಿದೆ’ ಎಂದು ಲಿಂಗದಹಳ್ಳಿ ಠಾಣೆ ಪಿಎಸ್ಐ ಬಸವರಾಜಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.