ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಮೂಲದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಈಗ ಅವರ ಪರೀಕ್ಷಾ ವರದಿಯಲ್ಲಿ ಮಂಕಿಪಾಕ್ಸ್ ನೆಗಟಿವ್ ಎಂದು ಧೃಢಪಟ್ಟಿದ್ದು, ಚಿಕನ್‌ಪಾಕ್ಸ್ (ಸೀತಾಳೆ ಸಿಡುಬು)ಇರುವುದು ಪತ್ತೆಯಾಗಿದೆ.

ಈ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ರಾಜ್ಯದಲ್ಲಿ ಮಂಕಿಪಾಕ್ಸ್ ತಡೆಗಟ್ಟುವ ನಿಟ್ಟಿನಲ್ಲಿ ಸೋಂಕು ಕಂಡು ಬಂದಿರುವ ದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲೇ ಜ್ವರ, ಶೀತ, ತಲೆನೋವು, ಸ್ನಾಯು ನೋವು, ಆಯಾಸ ಮತ್ತು ದುಗ್ಧರಸ ಗ್ರಂಥಿಗಳ ಊತ ಮುಂತಾದ ಲಕ್ಷಣಗಳ ಪತ್ತೆಗಾಗಿ ತಪಾಸಣೆ ನಡೆಸಲಾಗುತ್ತಿದೆ’ ಎಂದು ಸುಧಾಕರ್ ತಿಳಿಸಿದ್ದಾರೆ.

ಓದಿ...ರಾಜ್ಯದಲ್ಲಿ ಮೊದಲ ಮಂಕಿಪಾಕ್ಸ್ ಲಕ್ಷಣ ಪತ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.