ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆ: ತಮಿಳುನಾಡಿನ ರಾಜಕಾರಣ ಸರಿಯಲ್ಲ -ಬಸವರಾಜ ಬೊಮ್ಮಾಯಿ

Last Updated 9 ಆಗಸ್ಟ್ 2021, 7:39 IST
ಅಕ್ಷರ ಗಾತ್ರ

ಮೈಸೂರು: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಈ ವಿಚಾರದಲ್ಲಿ ತಮಿಳುನಾಡು ಮಾಡುತ್ತಿರುವ ರಾಜಕಾರಣ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಕಾವೇರಿ ನದಿ ನೀರಿನ ವಿಚಾರವನ್ನು ರಾಜಕಾರಣಕ್ಕೆ ಬಳಕೆ ಮಾಡಿಕೊಂಡು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಏರಿದ ಉದಾಹರಣೆಗಳು ತಮಿಳುನಾಡಿನಲ್ಲಿದೆ. ಈಗಲೂ ಇಂತಹ ರಾಜಕಾರಣ ಮುಂದುವರಿದಿವೆ. ರಾಜಕಾರಣಕ್ಕಿಂತ ಜನರ ಕಲ್ಯಾಣ ಮುಖ್ಯ ಎಂದು ಇಲ್ಲಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಮೇಕೆದಾಟು ವಿಚಾರದಲ್ಲಿ ಮತ್ತೊಮ್ಮೆ ದೆಹಲಿಗೆ ತೆರಳಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ ತಮಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ ಎಂದು ಹೇಳಿರುವುದರಿಂದ ಅವರಿಗೆ ನಿಕಟಪೂರ್ವ ಮುಖ್ಯಮಂತ್ರಿಯ ಸ್ಥಾನಮಾನವನ್ನಷ್ಟೇ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಆನಂದ್ ಸಿಂಗ್ ಅವರೊಂದಿಗೆ ಮೊದಲ ಸುತ್ತಿನ ಮಾತುಕತೆ ನಡೆಸಿದ್ದೇನೆ. ಮತ್ತೊಮ್ಮೆ ಕರೆದು ಮಾತನಾಡುತ್ತೇನೆ. ಶಾಸಕ ರಾಮದಾಸ್ ಆತ್ಮೀಯ ಸ್ನೇಹಿತರು. ಅವರೊಂದಿಗೂ ಮಾತನಾಡುತ್ತೇನೆ. ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನಗಳಷ್ಟೇ ಇದ್ದು ಅವುಗಳನ್ನು ಬಗೆಹರಿಸಲು ಪ್ರಯತ್ನಪಡುತ್ತಿದ್ದೇನೆ ಎಂದರು.

ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.ಚಾಮುಂಡಿಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಅವರೊಂದಿಗೆ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT