ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದ ಸಂಸದ ‍ಪಿ.ಸಿ. ಮೋಹನ್

Last Updated 26 ಮಾರ್ಚ್ 2020, 14:11 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್-19 ಸೋಂಕಿತರ ಚಿಕಿತ್ಸಾ ಸೌಕರ್ಯಗಳಿಗೆ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಸಂಸದ ‍ಪಿ.ಸಿ. ಮೋಹನ್ ₹2 ಕೋಟಿ ಅನುದಾನ ನೀಡಿದ್ದಾರೆ.

ಕೊರೊನಾ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1700 ಹಾಸಿಗೆಗಳ ಪ್ರತ್ಯೇಕ ಘಟಕ ಘೋಷಣೆಯಾದ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲ ಉಪಕರಣಗಳ ಸಿದ್ಧತೆಗೆ ಜನಪ್ರತಿನಿಧಿಗಳು ಕೂಡ ಕೈಜೋಡಿಸಿದ್ದಾರೆ.

ಕೊರೊನಾ ಎದುರಿಸಲು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಶ್ಲಾಘಿಸಿರುವ ಮೋಹನ್, ಈಗಾಗಲೇ ರಾಜ್ಯ ಸರ್ಕಾರ 1700 ಹಾಸಿಗೆಗಳನ್ನೊಳಗೊಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸಮುಚ್ಚಯವನ್ನು ಕೋವಿಡ್-19 ಸೋಂಕಿತರಿಗಾಗಿ ಪ್ರತ್ಯೇಕವಾಗಿರಿಸಿದ್ದು, ಈ ಆಸ್ಪತ್ರೆ ಸಮುಚ್ಚಯಗಳ ತೀವ್ರ ನಿಗಾ ಘಟಕಗಳಲ್ಲಿ ಅತ್ಯಾವಶ್ಯವಾಗಿರುವ ವೆಂಟಿಲೇಟರ್ ಸೌಲಭ್ಯ, ಎನ್-95 ರೆಸ್ಪಿರೇಟರ್ಸ್ ಮತ್ತು ಸರ್ಜಿಕಲ್ ಮಾಸ್ಕ್ ಸೇರಿದಂತೆ ಪರ್ಸನಲ್ ಪ್ರೊಟೆಕ್ಟೀವ್ ಉಪಕರಣಗಳೇ ಮೊದಲಾದ ಅಗತ್ಯ ಪರಿಕರಗಳನ್ನು ತುರ್ತಾಗಿ ಖರೀದಿಸುವಂತೆ ಸೂಚಿಸಿದರು.

ಪ್ರಸಕ್ತ ಬಿಕ್ಕಟ್ಟನ್ನು ಎದುರಿಸಲು ಸಾಧ್ಯವಿರುವ ಎಲ್ಲಾ ಸಹಕಾರವನ್ನು ತಾವು ಸರ್ಕಾರಕ್ಕೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸಚಿವರುಗಳಾದ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ, ಸುರೇಶ್ ಕುಮಾರ್, ಡಾ.ಕೆ. ಸುಧಾಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT