ವಿಜಯಪುರ: ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಿದ ಕೃಷ್ಣಾ ಜಲಾಶಯಕ್ಕೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.

ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಪಿ ಮೂರನೇ ಹಂತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ದವಿದೆ. ಆದರೆ, ಇದಕ್ಕೂ ಮುನ್ನಾ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಿದೆ. ಅದು ಆಗದೇ ಯುಕೆಪಿ ಮೂರನೇ ಹಂತ ಅನುಷ್ಠಾನ ಅಸಾಧ್ಯ. ಮೂರನೇ ಹಂತದ ಅನುಷ್ಠಾನಕ್ಕೆ ಅಂದಾಜು ₹1 ಲಕ್ಷ ಕೋಟಿ ಅನುದಾನ ಅಗತ್ಯ ಇದೆ.ಈ ಹಿನ್ನೆಲೆಯಲ್ಲಿ ಯುಕೆಪಿ ರಾಷ್ಟ್ರೀಯ ಯೋಜನೆಯಾಗಬೇಕಿದೆ ಎಂದರು.

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯದ ಹಿತರಕ್ಷಣೆ ಕೆಲಸ ನಮ್ಮ ಸರ್ಕಾರ ಮಾಡಲಿದೆ ಎಂದರು.

ಈ ಸಂಬಂಧ ಪ್ರಧಾನಿ, ಕೇಂದ್ರ ಜಲಸಂಪನ್ಮೂಲ ಸಚಿವರ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ಸಮಯ ಕೇಳಲಾಗಿದೆ. ಸಮಯ ಕೊಟ್ಟರೆ ಭೇಟಿಯಾಗಿ ವಸ್ತುಸ್ಥಿತಿ ತಿಳಿಸಲಾಗುವುದು ಎಂದರು.

ಉಪ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಮಾತನಾಡಿ, ಮಳೆ ಕೊರತೆ ನಡುವೆಯೂ ಈ ಬಾರಿ ಕೃಷ್ಣೆ ತುಂಬಿದೆ. ಬಾಗಿನ ಅರ್ಪಣೆ ಮಾಡಿದ್ದೇವೆ. ರೈತರ ಹಿತ ಕಾಪಾಡಲು ಆದ್ಯತೆ ನೀಡುತ್ತೇವೆ. ಪುನರ್ವಸತಿ, ಪುನರ್ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಕಾವೇರಿ ವಿಷಯದಲ್ಲಿ ಯಾವುದೇ ಆತಂಕ ಬೇಡ. ನಮ್ಮ ವಕೀಲರು ಸಮರ್ಥವಾಗಿ ರಾಜ್ಯದ ಪರ ವಾದ ಮಂಡಿಸುತ್ತಿದ್ದಾರೆ. ರಾಜ್ಯದ ರೈತರ ಪರವಾಗಿ ಸರ್ಕಾರ ಇರಲಿದೆ ಎಂದರು.

ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಕೃಷ್ಣ ಬೈರೇಗೌಡ, ಆರ್. ಬಿ.ತಿಮ್ಮಾಪುರ, ಶಾಸಕರಾದ ಯಶವಂತ ರಾಯಗೌಡ ಪಾಟೀಲ ಸಿ.ಎಸ್.ನಾಡಗೌಡ, ಅಶೋಕ ಮನಗೂಳಿ, ವಿಠಲ ಕಟಕದೋಂಡ, ಎಚ್.ವೈ.ಮೇಟಿ, ವಿಜಯಾನಂದ ಕಾಶಪ್ಪನವರ, ಜೆ.ಟಿ.ಪಾಟೀಲ, ಭೀಮಸೇನ ಚಿಮ್ಮನಕಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಪ್ರಕಾಶ ರಾಠೋಡ, ಸುನೀಲ್ ಗೌಡ ಪಾಟೀಲ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಕೆಬಿ ಜಿಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿವಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.