ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ಯಾರಂಟಿಗಳು ಜನರಿಗೆ ತಲುಪಿಲ್ಲವೆಂದು ಬಿಜೆಪಿಯವರು ಸಾಬೀತುಪಡಿಸಲಿ: ಸಿಎಂ ಸವಾಲು

Published 27 ನವೆಂಬರ್ 2023, 16:17 IST
Last Updated 27 ನವೆಂಬರ್ 2023, 16:17 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಬಂಡವಾಳ. ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಜನರಿಗೆ ತಲುಪಿಲ್ಲವೆಂಬುದನ್ನು ಅವರು ಸಾಬೀತುಪಡಿಸಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು.

‘ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ’ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದೆ. ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು. ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಡಿಸೆಂಬರ್ ಅಂತ್ಯದೊಳಗೆ ಹಣ ಒದಗಿಸಲು ಸೂಚನೆ ನೀಡಲಾಗಿದೆ’ ಎಂದರು.

‌ವಿಳಂಬಕ್ಕೆ ಕಾರಣವೇನು?:

ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ, ‘ರಾಜ್ಯದಿಂದ ಪಡೆದ ಹಣವನ್ನೇ ಕೇಂದ್ರ ಸರ್ಕಾರ ಪರಿಹಾರವಾಗಿ ನೀಡುತ್ತದೆ. ಈ ಪರಿಹಾರವನ್ನು ನೀಡಲು ಕೇಂದ್ರ ವಿಳಂಬ ನೀತಿ ತೋರುತ್ತಿದೆ. ಈ ವಿಳಂಬಕ್ಕೆ ಕಾರಣವೇನು? ಕರ್ನಾಟಕದಿಂದ ಸುಮಾರು ₹4 ಲಕ್ಷ ಕೋಟಿ ತೆರಿಗೆ ಹಣ ಕೇಂದ್ರಕ್ಕೆ ತಲುಪಿದರೂ, ರಾಜ್ಯಕ್ಕೆ ಪರಿಹಾರವಾಗಿ ಕೇವಲ ₹ 50 ಸಾವಿರ ಕೋಟಿಯಿಂದ ₹ 60 ಸಾವಿರ ಕೋಟಿ ಬರುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT