ನೀವು ಐದು ವರ್ಷ ಅಧಿಕಾರ ಅವಧಿ ಪೂರ್ಣಗೊಳಿಸುತ್ತೀರಾ ಅಥವಾ ವರ್ಷಾಂತ್ಯದ ಹೊತ್ತಿಗೆ ಬಹುಶಃ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡುತ್ತೀರಾ?
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರಲ್ಲ? ಸರ್ಕಾರದ ನಾಯಕತ್ವ ಬದಲಾಗಬೇಕು ಎಂದು ಕೆಲವು ಶಾಸಕರು ಧ್ವನಿ ಎತ್ತಿದ್ದಾರಲ್ಲ?
ಕೆಲವು ಶಾಸಕರು ಈ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರಲ್ಲ?
ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಸೂತ್ರವನ್ನು 2023ರಲ್ಲೇ ಹೆಣೆಯಲಾಗಿದೆ ಎಂಬ ಸುದ್ದಿ ಇದೆಯಲ್ಲ?
ಮುಖ್ಯಮಂತ್ರಿ ಬದಲಾವಣೆ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರಲ್ಲ?
ಅಧಿಕಾರ ಹಸ್ತಾಂತರ ಮಾಡಬೇಕು ಎಂದು ಹೈಕಮಾಂಡ್ ಸುಳಿವು ನೀಡಿದೆಯಾ? ಖರ್ಗೆ ನಿಮಗೆ ಏನಾದರೂ ಹೇಳಿದ್ದಾರ?
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣಗಳ ಕಚ್ಚಾಟ ತೀವ್ರವಾಗಿದೆಯಲ್ಲ? ಇದರಿಂದ ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆಯಲ್ಲ?
ಕಾಂಗ್ರೆಸ್‌ನ ಕೆಲವು ಶಾಸಕರು ಅಧಿಕಾರ ಹಸ್ತಾಂತರ ಆಗಬೇಕೆಂದು ಹೇಳುತ್ತಿದ್ದಾರಲ್ಲ?
ಕೆಲವು ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು ಸುರ್ಜೇವಾಲಾ ಅವರಲ್ಲಿ ದೂರಿತ್ತಿದ್ದಾರೆ. ಕೆಲವು ಸಚಿವರನ್ನು ಸಂಪುಟದಿಂದ ಕೈಬಿಡುವ ಪ್ರಸ್ತಾವ ಇದೆಯೇ?
ಗ್ಯಾರಂಟಿ ಯೋಜನೆಗಳಿಂದ ಜನರು ಸೋಮಾರಿಗಳಾಗುತ್ತಿದ್ದಾರೆ ಎಂದು ರಂಭಾಪುರ ಸ್ವಾಮೀಜಿ ಹೇಳಿಕೆ ನೀಡಿದ್ದಾರಲ್ಲ.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ. ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯಲ್ಲಿ ಹಲವು ಸದಸ್ಯರು ಇದ್ದಾರೆ. ಸಿದ್ದರಾಮಯ್ಯ ಹಾಲಿ ಮುಖ್ಯಮಂತ್ರಿ ಆಗಿರುವ ಕಾರಣ ಅವರನ್ನೂ ಸೇರಿಸಿಕೊಂಡು ಜವಾಬ್ದಾರಿ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಆಗಬೇಕೆಂದು ಹಿತೈಶಿಗಳು ಹೇಳಬಹುದು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಆದರೆ, ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಅವರನ್ನೇ ಕೇಳಿ.ಕೆ.ಎಚ್.ಮುನಿಯಪ್ಪ, ಆಹಾರ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.