‘ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರ ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈ ಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದುರಿಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ‘ ಎಂದರು.