ಬೆಂಗಳೂರು: ‘ಮನೆಗೊಂದು ಗ್ರಂಥಾಲಯ'ದ ಮೊದಲ ಗ್ರಂಥಾಲಯವನ್ನು ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತಿ ಹಂ.ಪ. ನಾಗರಾಜಯ್ಯ ಅವರೊಂದಿಗೆ ಉದ್ಘಾಟಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಗ್ರಂಥಾಲಯ ಫಲಕವನ್ನು ಅನಾವರಣಗೊಳಿಸಿದರು.

ಮನೆಗೊಂದು ಗ್ರಂಥಾಲಯ ಈ ಯೋಜನೆಯು ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಯೋಜನೆಯಡಿ ರಾಜ್ಯದಾದ್ಯಂತ ಪ್ರಸಕ್ತ ಸಮಿತಿಯ ಅವಧಿಯಲ್ಲಿ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. ಪುಸ್ತಕಾಭಿರುಚಿಯನ್ನು ಇಂದಿನ ಯುವಪೀಳಿಗೆಯಲ್ಲಿ ಬೆಳೆಸುವುದು ಇದರ ಮುಖ್ಯ ಉದ್ದೇಶ.

ಮರೆಯಾಗುತ್ತಿರುವ ಪುಸ್ತಕ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿಯೂ ಒಂದು ಪುಟ್ಟ ಗ್ರಂಥಾಲಯ ಕಟ್ಟುವುದು ಈ ಯೋಜನೆಯ ಕನಸು. ಪ್ರಾಧಿಕಾರ ತಮ್ಮ ಮನೆಗಳಲ್ಲಿ ಗ್ರಂಥಾಲಯ ಆರಂಭಿಸುವ ಇಚ್ಛೆ ಉಳ್ಳವರನ್ನು ಸಂಪರ್ಕಿಸಿ ಆ ಭಾಗದ ಸಾಹಿತಿ ಬರಹಗಾರರನ್ನು ಅವರ ಮನೆಗೆ ಕರೆದೊಯ್ದು, ಅಲ್ಲೊಂದು ಕಾರ್ಯಕ್ರಮವನ್ನು ಆಯೋಜಿಸಿ ಪ್ರಾಧಿಕಾರದ ಪರವಾಗಿ ಅವರಿಗೊಂದು ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಯೋಜನೆಯ ಪ್ರಮುಖ ಅಂಶಗಳು

ಮನೆಯಲ್ಲಿ, ಸಂಘ ಸಂಸ್ಥೆಗಳಲ್ಲಿ ಕಚೇರಿಗಳಲ್ಲಿ ಗ್ರಂಥಾಲಯ ಸ್ಥಾಪನೆ. ಮನೆಯ ಒಡೆಯರು 100 ಪುಸ್ತಗಳಿಂದ ಆರಂಭಿಸಿ ಗ್ರಂಥಾಲಯವನ್ನು ಸ್ಥಾಪನೆ ಮಾಡಬೇಕು. ಪುಸ್ತಕಗಳ ಖರೀದಿ ಹಾಗೂ ಅವುಗಳನ್ನು ಸುಸಜ್ಜಿತವಾಗಿ ಇಡುವ ಜವಾಬ್ದಾರಿ ಮನೆಯ ಮಾಲೀಕರದ್ದು.

ಗ್ರಂಥಾಲಯವನ್ನು ಗಣ್ಯರಿಂದ/ ವಿದ್ವಾಂಸರುಗಳಿಂದ / ಕಲಾವಿದರುಗಳಿಂದ ಉದ್ಘಾಟನೆಯನ್ನು ಮಾಡಿಸುವ ಜವಾಬ್ದಾರಿ ಪ್ರಾಧಿಕಾರದ್ದು.

ಪ್ರಚಾರದ ಜವಾಬ್ದಾರಿ ಪ್ರಾಧಿಕಾರದ್ದು ತಾಲ್ಲೂಕು / ಜಿಲ್ಲಾ ಮಟ್ಟದಲ್ಲಿ ಗ್ರಂಥಾಲಯ ಜಾಗೃತ ಸಮಿತಿ ರಚನೆ. ಗ್ರಂಥಾಲಯ ಸ್ಥಾಪಿಸಲು ಪ್ರೋತ್ಸಾಹ ನೀಡುವುದು, ಅದರ ಜೊತೆ ನಿಕಟ ಸಂಪರ್ಕ ಸಮಿತಿಯ ಜವಾಬ್ದಾರಿ.

ಕುಮಾರವ್ಯಾಸಭಾರತ ಕೃತಿ ಬಿಡುಗಡೆ

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ಕುಮಾರ ವ್ಯಾಸಭಾರತ ಕೃತಿಯ ಸಂಪುಟಗಳನ್ನು ಬಿಡುಗಡೆ ಮಾಡಿದರು.

ಆಡು ಭಾಷೆಯಲ್ಲಿ ಮಹಾ ಕಾವ್ಯ ಕಟ್ಟಿಕೊಟ್ಟ ಹಿರಿಮೆ ಗದುಗಿನ ನಾರಾಣಪ್ಪ ಅವರದ್ದು. ಕುಮಾರವ್ಯಾಸ ಎಂದೇ ಪ್ರಖ್ಯಾತರಾದ ಗದುಗಿನ ನಾರಾಣಪ್ಪ ರಚಿಸಿದ ಕರ್ಣಾಟಭಾರತಕಥಾಮಂಜರಿ' ಕುಮಾರವ್ಯಾಸಭಾರತ ಎಂದೇ ಪ್ರಖ್ಯಾತವಾಗಿದೆ. ಕನ್ನಡ ಸಾಹಿತ್ಯ ಲೋಕದ ಅಜರಾಮರ ಕೃತಿಯಾದ ಕುಮಾರವ್ಯಾಸಭಾರತವನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಓದುಗರಿಗೆ ಒದಗಿಸಲಾಗುವುದೆಂದು ಸುವರ್ಣ ಸಂಭ್ರಮ ಕಾರ್ಯಕ್ರಮದ ನಿಮಿತ್ತ ಕಳೆದ ವರ್ಷ ಗದಗಿನಲ್ಲಿ ಆಚರಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಘೋಷಿಸಿದ್ದರು. ಅದರಂತೆ ಕನ್ನಡ ಗಣಕ ಪರಿಷತ್ತು ಈ ಹಿಂದೆ ಪ್ರಕಟಿಸಿದ್ದ ಕುಮಾರವ್ಯಾಸಭಾರತದ ಕೃತಿಯ ಹಕ್ಕುಗಳನ್ನು ಪುಸ್ತಕ ಪ್ರಾಧಿಕಾರ ಪಡೆದುಕೊಂಡು ಈ ಕೃತಿಯನ್ನು ಪ್ರಕಟಿಸಿದೆ.

ಕನ್ನಡ ಪುಸ್ತಕ ಪ್ರಾಧಿಕಾರ ಈ ಕುಮಾರವ್ಯಾಸಭಾರತವನ್ನು ಎರಡು ಸಂಪುಟಗಳಲ್ಲಿ ಪ್ರಕಟಿಸಿದೆ. ಈ ಎರಡೂ ಸಂಪುಟಗಳು ಸೇರಿ ಒಟ್ಟು ₹500 ಬೆಲೆ ನಿಗದಿಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಇಲಾಖೆ ಕಾರ್ಯದರ್ಶಿ ಎನ್. ಮಂಜುಳಾ, ಇಲಾಖೆ ನಿರ್ದೇಶಕಿ ಧರಣೀದೇವಿ ಮಾಲಗತ್ತಿ ಹಾಗೂ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕಿರಣ್ ಸಿಂಗ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.