ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದಿಂದ ಬರಬೇಕಾದ್ದೆಲ್ಲವನ್ನೂ ಒತ್ತಾಯಪೂರ್ವಕವಾಗಿ ಕೇಳ್ತೀವಿ: ಸಿಎಂ ಸಿದ್ದರಾಮಯ್ಯ

Published 10 ಜೂನ್ 2023, 9:18 IST
Last Updated 10 ಜೂನ್ 2023, 9:18 IST
ಅಕ್ಷರ ಗಾತ್ರ

ಮೈಸೂರು: 'ಜಿಎಸ್‌ಟಿ ಪಾಲು ಸೇರಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಹಣವನ್ನು ಒತ್ತಾಯಪೂರ್ವಕವಾಗಿ ಕೇಳುತ್ತೇವೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎರಡನೇ ಬಾರಿಗೆ ಮುಖ್ಯಮಂತ್ರಿಯಾದ‌ ನಂತರ ಇದೇ ಮೊದಲಿಗೆ ಜಿಲ್ಲಾ ಪ್ರವಾಸ ಕೈಗೊಂಡಿರುವ ಅವರು ನಂಜನಗೂಡು ತಾಲ್ಲೂಕಿನ ಸುತ್ತೂರು ಹೆಲಿಪ್ಯಾಡ್‌ನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದರು.

'ಶಕ್ತಿ ಯೋಜನೆಗೆ ಭಾನುವಾರ ಚಾಲನೆ ನೀಡಲಾಗುವುದು. ಮಹಿಳೆಯರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದ ಎಲ್ಲ ಮಹಿಳೆಯರಿಗೂ ಅವಕಾಶ ಇದೆ. ವೋಲ್ವೋ, ಎಸಿ ಬಸ್ ಬಿಟ್ಟು ಇತರ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು' ಎಂದರು.

'ಭಾನುವಾರ ಮಧ್ಯಾಹ್ನ 1ಕ್ಕೆ ಯೋಜನೆಗೆ ಚಾಲನೆ ನೀಡಲಾಗುವುದು. ವಿಧಾನಸೌಧದ ಬಳಿ ನಾನು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಲಿದ್ದೇವೆ. ಜಿಲ್ಲಾ ಕೇಂದ್ರದಲ್ಲಿ ಏಕಕಾಲಕ್ಕೆ ಜಾರಿಯಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದರು.

ರಾಜ್ಯದಲ್ಲಿ ಮಳೆ ಕೊರತೆ ಆತಂಕ ಎದುರಾಗಿರುವುದರಿಂದ ಚರ್ಚಿಸಲು ಸೋಮವಾರ ಅಧಿಕಾರಿಗಳ ಸಭೆ ಕರೆದಿದ್ದೇನೆ. ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಿದ್ದೇನೆ. ಜಿಲ್ಲಾಧಿಕಾರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ನಡೆಸಲಿದ್ದೇನೆ. ಜನರಿಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು' ಎಂದು ತಿಳಿಸಿದರು.

ಜುಲೈ 1ರಂದು ಕಲಬುರ್ಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು. ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ಕೊಡುವ ಕಾರ್ಯಕ್ರಮಕ್ಕೆ ಜುಲೈ 1ರಂದು ಮೈಸೂರಿನಲ್ಲಿ ಚಾಲನೆ ಕೊಡಲಾಗುವುದು. ಜುಲೈ 16ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆ ಅರಂಭಿಸಲಾಗುವುದು. 2022-23ರಲ್ಲಿ ಪಾಸ್ ಆದ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಯುವ ನಿಧಿಯಡಿ ಆರ್ಥಿಕ ನೆರವು ನೀಡಲಾಗುವುದು ಎಂದರು.

ಕೋವಿಡ್ ಬೂಸ್ಟರ್ ಡೋಸ್ ಪೂರೈಕೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಿರುವುದು ಗೊತ್ತಿಲ್ಲ. ವಿಷಯವಾಗಿ ಮಾಹಿತಿ ಪಡೆಯುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಇದ್ದರು.

ಮೈಸೂರು ‌ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಿಳಿಗೆರೆಬೋರೆಯಲ್ಲಿ ಶನಿವಾರ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಮುಖ್ಯಮಂತ್ರಿ ‌ಸಿದ್ದರಾಮಯ್ಯ ಉದ್ಘಾಟಿಸಿದರು.
ಮೈಸೂರು ‌ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಿಳಿಗೆರೆಬೋರೆಯಲ್ಲಿ ಶನಿವಾರ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಮುಖ್ಯಮಂತ್ರಿ ‌ಸಿದ್ದರಾಮಯ್ಯ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT