ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆ, ಆಯುಕ್ತಾಲಯ, ನಿರ್ದೆಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದ್ದಾರೆ.