ಚಿಕ್ಕಬಳ್ಳಾಪುರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಿಕೆಶಿ ಸಿ.ಎಂ ಗಾದಿ ಏರುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ನೀರಾವರಿ ಮತ್ತು ರಾಜಕಾರಣದ ವಿಚಾರವಾಗಿ ನಾನಾ ರೀತಿಯ ಚರ್ಚೆಗಳು ಗರಿಗೆದರಿವೆ.

‘ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಎತ್ತಿನಹೊಳೆ ಯೋಜನೆಯ ನೀರನ್ನು ಪೈಪ್ಲೈನ್ ಬದಲು ತೆರೆದ ಕಾಲುವೆಯಲ್ಲಿ ತರಲು ತೀರ್ಮಾನಿಸಲಾಗಿದೆ. ಹೀಗೆ ಮಾಡಿದರೆ ಮೂರು ತಿಂಗಳಲ್ಲಿ ನೀರು ತರಲು ಸಾಧ್ಯವಿದೆ’ ಎಂದು 2018ರಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಅಂದು ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದರು.

2023ರ ಸಿದ್ದರಾಮಯ್ಯ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವರಾಗಿದ್ದರು. ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ ಸಮಯದಲ್ಲಿ ಮತ್ತು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರು ವಿಧಾನ ಮಂಡಲದ ಅಧಿವೇಶನದಲ್ಲಿ ಎತ್ತಿನಹೊಳೆ ವಿಚಾರವನ್ನು ಪ್ರಸ್ತಾಪಿಸಿದಾಗ, ‘2027ರ ವೇಳೆಗೆ ಎತ್ತಿನಹೊಳೆ ನೀರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹರಿಯುತ್ತದೆ’ ಎಂದು ಭರವಸೆ ನೀಡಿದ್ದರು. ಎತ್ತಿನಹೊಳೆ ಕಾಮಗಾರಿಗಳನ್ನೂ ಪರಿಶೀಲಿಸಿದ್ದರು.

ಈಗ ಅವರೇ ಮುಖ್ಯಮಂತ್ರಿ ಆಗಿರುವ ಕಾರಣ ಚಿಕ್ಕಬಳ್ಳಾಪುರ ಜಿಲ್ಲೆಯ ಜನರು ನೀರಾವರಿ ಯೋಜನೆಗಳ ಬಗ್ಗೆ ಅಪಾರವಾದ ನಿರೀಕ್ಷೆಗಳನ್ನು ಹೊಂದಿದ್ದಾರೆ. ವಿಶೇಷವಾಗಿ ಜಿಲ್ಲೆಯ ಜನರ ಬಹು ನಿರೀಕ್ಷಿತ ಎತ್ತಿನಹೊಳೆ ನೀರು ಡಿ.ಕೆ.ಶಿ ಹೇಳಿದಂತೆ 2027ರ ವೇಳೆಗೆ ಜಿಲ್ಲೆಗೆ ಹರಿಯುತ್ತದೆಯೇ ಎನ್ನುವ ನಿರೀಕ್ಷೆ ಅಪಾರವಾಗಿದೆ.

ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿಯೇ ದಶಕಗಳ ಹಿಂದೆ ಭೂಮಿ ಪೂಜೆ ನೆರವೇರಿಸಿದರೂ ಜಿಲ್ಲೆಗೆ ಮಾತ್ರ ಹನಿ ನೀರು ಹರಿದಿಲ್ಲ.

2016ರ ಜನವರಿ 23ರಂದು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ ನಡೆಯಿತು. ಇದೇ ಸಮಯದಲ್ಲಿ ಜಿಲ್ಲೆಗೆ ಶಾಶ್ವತ ನೀರಾವರಿಗಾಗಿ ಆಗ್ರಹಿಸಿ ನೀರಾವರಿ ಹೋರಾಟಗಾರರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮನ್ನು ಭೇಟಿಯಾಗಬೇಕು ಎಂದು ಒತ್ತಾಯಿಸಿ ಹೋರಾಟಗಾರರು ವಿಷದ ಬಾಟಲಿ ಮುಂದಿಟ್ಟುಕೊಂಡು ಘೋಷಣೆ ಕೂಗಿದ್ದರು. ಅಂದು ನಡೆದಿದ್ದ 125 ನೇ ದಿನದ ಧರಣಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಹೋರಾಟಗಾರರ ಅಹವಾಲು ಆಲಿಸಿದ್ದರು.

ಹೀಗೆ ಅಂದಿನಿಂದಲೂ ಚಿಕ್ಕಬಳ್ಳಾಪುರ ಜಿಲ್ಲೆಯ ನೀರಾವರಿ ಬವಣೆ ಮತ್ತು ಹೋರಾಟಗಳ ಬಗ್ಗೆ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ಇದೆ.

2022ರ ಜೂನ್ನಲ್ಲಿ ನಡೆದ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ, ಜನಧ್ವನಿ ಯಾತ್ರೆ, ಕೈವಾರ ಯೋಗಿ ನಾರೇಯಣ ಮಠಕ್ಕೆ ಭೇಟಿ, ‘ಮನರೇಗಾ’ ಮರುಸ್ಥಾಪಿಸಬೇಕು, ‘ವಿಬಿ–ಜಿ ರಾಮ್ ಜಿ’ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ‘ಮನರೇಗಾ ಬಚಾವ್ ಸಂಗ್ರಾಮ’, ಶಿಡ್ಲಘಟ್ಟದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ...ಹೀಗೆ ಡಿ.ಕೆ.ಶಿವಕುಮಾರ್ ಚುನಾವಣೆ ಸಂದರ್ಭ ಅಲ್ಲದೆ ಬೇರೆ ಬೇರೆ ಸಮಯದಲ್ಲಿಯೂ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ಒಕ್ಕಲಿಗ ಮತ ಬ್ಯಾಂಕ್: ಜಿಲ್ಲೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಾಬಲ್ಯವಿದೆ. ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಮತ್ತು ಚಿಂತಾಮಣಿಯಲ್ಲಿ ಒಕ್ಕಲಿಗ ಸಮುದಾಯದ ಶಾಸಕರು ಇದ್ದಾರೆ. ಚಿಕ್ಕಬಳ್ಳಾಪುರದಲ್ಲಿಯೂ ಒಕ್ಕಲಿಗ ಸಮುದಾಯ ಬಹುಸಂಖ್ಯೆಯಲ್ಲಿದೆ. ಜಿಲ್ಲೆಯ ರಾಜಕೀಯದಲ್ಲಿ ಈ ಸಮುದಾಯ ಪಾತ್ರ ಪ್ರಧಾನವಾದುದು.

ಒಕ್ಕಲಿಗರ ಪ್ರಾಬಲ್ಯದ ಕಾರಣದಿಂದಲೇ ಜಿಲ್ಲೆಯಲ್ಲಿ ಜೆಡಿಎಸ್ಗೆ ತಮ್ಮದೇ ಆದ ಮತ ಬ್ಯಾಂಕ್ ಇದೆ. ಜೆಡಿಎಸ್ನ ಈ ಮತ ಬ್ಯಾಂಕ್ ಗಟ್ಟಿಯಾಗಿ ಉಳಿಯುತ್ತದೆಯೇ ಅಥವಾ ಚದುರುತ್ತದೆಯೇ ಎನ್ನುವ ಚರ್ಚೆಗಳು ನಡೆದಿವೆ.

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿದ್ದಂತೆ ‘ನಮ್ಮವ’ ಎನ್ನುವ ಭಾವನೆ ಸಹ ಸಮುದಾಯದಲ್ಲಿ ಮೂಡಿದೆ. ಈ ಅಭಿಮಾನ ಮುಂದಿನ ಚುನಾವಣೆಗಳಲ್ಲಿ ಒಕ್ಕಲಿಗ ಮತಗಳ ಧ್ರುವೀಕರಣದಲ್ಲಿ ಯಾವ ರೀತಿ ಪಾತ್ರವಹಿಸುತ್ತದೆ ಎನ್ನುವ ಚರ್ಚೆಗಳು ಜಿಲ್ಲೆಯ ರಾಜಕೀಯದಲ್ಲಿ ಜೋರಾಗಿದೆ.

ಎಂಸಿಎಸ್ ಕರೆತರುವಲ್ಲಿ ಪ್ರಮುಖ ಪಾತ್ರ

ಕೆ.ಎಚ್.ಮುನಿಯಪ್ಪ ಅವರ ಜೊತೆಗಿನ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ನಿಂದ ದೂರವಾಗಿದ್ದ ಮತ್ತು ಎರಡು ಬಾರಿ ಪಕ್ಷೇತರರಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಡಾ.ಎಂ.ಸಿ.ಸುಧಾಕರ್ ಅವರನ್ನು ಮತ್ತೆ ಕಾಂಗ್ರೆಸ್ಗೆ ಕರೆ ತರುವಲ್ಲಿ ಡಿ.ಕೆ.ಶಿ ಪಾತ್ರ ಹಿರಿದು. ಸುಧಾಕರ್ ಕಾಂಗ್ರೆಸ್ಗೆ ಮರು ಸೇರ್ಪಡೆಗೆ ವೇದಿಕೆ ಸಿದ್ಧಗೊಳಿಸಿ ಅವರನ್ನು ರಾಹುಲ್ ಗಾಂಧಿ ಅವರಿಗೆ ಭೇಟಿ ಮಾಡಿಸಿದ್ದರು.

ಬಯಲು ಸೀಮೆ ನೀರಾವರಿಗೆ ಗಮನಹರಿಸಲಿ: ಹೋರಾಟ ಸಮಿತಿ

ಬಯಲು ಸೀಮೆಯ ಬರಪೀಡಿತ ಜಿಲ್ಲೆಗಳ ನೀರಾವರಿಗೆ ನೂತನ ಮುಖ್ಯಮಂತ್ರಿ ಆಸಕ್ತಿವಹಿಸಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಡಿ.ಕೆ.ಶಿವಕುಮಾರ್ ಅವರನ್ನು ಕೋರಿದೆ.

‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2014ರಲ್ಲಿ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ಮಾಡಿತ್ತು. ಆದರೆ ಸಿದ್ದರಾಮಯ್ಯ ಅವರು ಈ ಯೋಜನೆಯನ್ನು ಸಾಕಾರಗೊಳಿಸಲಿಲ್ಲ. ಡಿ.ಕೆ.ಶಿವಕುಮಾರ್ ಅವರು ಸಹ ಎರಡು ಬಾರಿ ಜಲಸಂಪನ್ಮೂಲ ಸಚಿವರಾಗಿ ಕೆಲಸ ಮಾಡಿದರು. ಹೀಗಿದ್ದರೂ ಈ ಬರ ಪೀಡಿತ ಬಯಲು ಸೀಮೆಯ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಿಲ್ಲ’ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ಕೋರಿದ್ದಾರೆ.

ಕೃಷ್ಣಾ, ಪೆನ್ನಾರ್ ನದಿಯಿಂದ ಈ ಜಿಲ್ಲೆಗಳಿಗೆ ನೀರು ಹರಿಸಲು ಅವಕಾಶವಿದ್ದರೂ ಕ್ರಮವಹಿಸಿಲ್ಲ. ನೂತನ ಮುಖ್ಯಮಂತ್ರಿ ಅವರು ಕೆ.ಸಿ ವ್ಯಾಲಿ, ಎಚ್.ಎನ್.ವ್ಯಾಲಿ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸಲು ಕ್ರಮವಹಿಸಬೇಕು. ಎತ್ತಿನಹೊಳೆ ಯೋಜನೆಯನ್ನು ಮರು ಪರಿಶೀಲಿಸಬೇಕು. ಈ ನಮ್ಮ ಮನವಿಗೆ ಡಿ.ಕೆ.ಶಿವಕುಮಾರ್ ಸ್ಪಂದಿಸಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-18-1521563060

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.