ಚಿಕ್ಕಬಳ್ಳಾಪುರ: ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎನ್ನುವ ಕುತೂಹಲವಿದೆ. ಮತ್ತೊಮ್ಮೆ ಸಚಿವರಾಗಬೇಕು ಎನ್ನುವ ದೃಷ್ಟಿಯಿಂದ ಡಾ.ಎಂ.ಸಿ. ಸುಧಾಕರ್ ಮತ್ತು ಈ ಬಾರಿ ಸಚಿವ ಸ್ಥಾನ ಪಡೆಯಲೇಬೇಕು ಎನ್ನುವ ಛಲದಲ್ಲಿ ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ನವದೆಹಲಿ ಯಾತ್ರೆ ನಡೆಸಿದ್ದಾರೆ.

ಭಾನುವಾರ ಈ ಇಬ್ಬರು ಶಾಸಕರು ನವದೆಹಲಿ ಯಾತ್ರೆ ನಡೆಸಿದ್ದಾರೆ. ಸಚಿವ ಸ್ಥಾನದ ಮೇಲೆ ದೃಷ್ಟಿ ಇಟ್ಟುಕೊಂಡಿರುವ ಶಾಸಕರ ದಂಡು ವರಿಷ್ಠರನ್ನು ಭೇಟಿ ಮಾಡಲು ಭಾನುವಾರ ಸಂಜೆ ದೆಹಲಿಗೆ ತೆರಳಿತು. ಸುಬ್ಬಾರೆಡ್ಡಿ ಮತ್ತು ಡಾ.ಎಂ.ಸಿ.ಸುಧಾಕರ್ ಸಹ ನವದೆಹಲಿಗೆ ತೆರಳಿದ್ದಾರೆ.

ಈ ಹಿಂದಿನಿಂದಲೂ ಈ ಇಬ್ಬರು ಶಾಸಕರು ವ್ಯಕ್ತಿಗಿಂತ ಪಕ್ಷ ನಿಷ್ಠೆ ಎನ್ನುವಂತಿದ್ದಾರೆ. ಬಹಿರಂಗವಾಗಿ ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿಲ್ಲ. ಈ ಇಬ್ಬರೂ ನಾಯಕರ ಜೊತೆ ಸಂಬಂಧ ಉತ್ತಮವಾಗಿದೆ. ‘ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ’ ಎಂದೇ ಹೇಳುತ್ತಿದ್ದಾರೆ. ಆದ್ದರಿಂದ ‘ಪಕ್ಷ ನಿಷ್ಠೆ’ ಯಾರಿಗೆ ವರವಾಗಲಿದೆ ಎನ್ನುವ ಕುತೂಹಲವಿದೆ.

ಡಾ.ಎಂ.ಸಿ.ಸುಧಾಕರ್, ಎಸ್.ಎನ್.ಸುಬ್ಬಾರೆಡ್ಡಿ ಯಾರ ಪರವಾಗಿಯೂ ಬಹಿರಂಗವಾಗಿ ಗುರುತಿಸಿಕೊಂಡಿಲ್ಲ. ಈ ಹಿಂದೆ ಮುಖ್ಯಮಂತ್ರಿ ಸ್ಥಾನದ ಬದಲಾವಣೆಯ ವಿಚಾರಗಳು ಚರ್ಚೆಗೆ ಒಳಗಾದ ವೇಳೆ ಯಾರ ಪರವಾಗಿಯೂ ಹೇಳಿಕೆ ನೀಡಿಲ್ಲ. ಇಲ್ಲಿಯವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿದ್ದಾರೆ.

ಈ ಎಲ್ಲ ಲೆಕ್ಕಾಚಾರದಲ್ಲಿ ವರಿಷ್ಠರಿಗೆ ತಮ್ಮ ‘ಪಕ್ಷ ನಿಷ್ಠೆ’, ‘ಪ್ರಭಾವ’ ಮತ್ತಿತರ ವಿಚಾರಗಳನ್ನು ಮನವರಿಕೆ ಮಾಡಿಕೊಡಬೇಕಾಗಿದೆ. ಸಚಿವ ಸ್ಥಾನಕ್ಕೆ ವರಿಷ್ಠರ ಮಟ್ಟದಲ್ಲಿ ‘ಲಾಬಿ’ಯೂ ಅಗತ್ಯ. ಈ ಎಲ್ಲ ದೃಷ್ಟಿಯಿಂದ ವರಿಷ್ಠರ ಭೇಟಿ ಅತಿ ಮುಖ್ಯವಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಲ್ಲಿ ಚಿಂತಾಮಣಿ ಶಾಸಕ ಡಾ.ಎಂ.ಸಿ.ಸುಧಾಕರ್ ಮತ್ತು ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ನಡುವೆ ಸಚಿವ ಸ್ಥಾನಕ್ಕೆ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಹೈಕಮಾಂಡ್ ಸುಧಾಕರ್ ಅವರಿಗೆ ನಿಶಾನೆ ತೋರಿತು. ಈ ಮತ್ತೆ ಈ ಇಬ್ಬರು ಶಾಸಕರ ಸುತ್ತಲೇ ಜಿಲ್ಲೆಯ ಸಚಿವ ಸ್ಥಾನದ ವಿಚಾರ ಚರ್ಚೆಗೆ ಒಳಗಾಗಿದೆ.

ಸುಬ್ಬಾರೆಡ್ಡಿ ಅವರು ಸಚಿವ ಸ್ಥಾನದ ವಿಚಾರವಾಗಿ ವರಿಷ್ಠರ ಭೇಟಿ ಮಾಡಲು ನವದೆಹಲಿಗೆ ತೆರಳದಿರುವುದೇ ಅವರು ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸ್ಥಾನದಿಂದ ವಂಚಿತವಾಗಲು ಕಾರಣ ಎನ್ನುವ ಮಾತುಗಳು ಸಹ ಆಗ ಕಾಂಗ್ರೆಸ್ ಪಡಸಾಲೆಯಲ್ಲಿ ಹೆಚ್ಚು ಕೇಳಿ ಬಂದಿತ್ತು. ನವದೆಹಲಿ ಮಟ್ಟದಲ್ಲಿ ವರಿಷ್ಠರನ್ನು ಭೇಟಿ ಮಾಡಲಿಲ್ಲ. ಸ್ಥಾನಕ್ಕಾಗಿ ಪ್ರಯತ್ನಗಳನ್ನು ನಡೆಸಲಿಲ್ಲ. ಇದೇ ಕಾರಣಕ್ಕೆ ಸುಬ್ಬಾರೆಡ್ಡಿ ಅವರಿಗೆ ಅವಕಾಶಗಳು ದೊರೆಯಲಿಲ್ಲ ಎನ್ನುವ ಮಾತುಗಳಿವೆ.

ಆದ್ದರಿಂದ ಸುಬ್ಬಾರೆಡ್ಡಿ ಅವರು ಸಚಿವ ಸ್ಥಾನದ ವಿಚಾರವಾಗಿ ಈಗಾಲೇ ಎರಡು ಮೂರು ಬಾರಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಸಚಿವ ಸಂಪುಟ ಪುನರ್ ರಚಿಸಬೇಕು ಎಂದು ಆಗ್ರಹಿಸಿ 25ಕ್ಕೂ ಹೆಚ್ಚು ಹಿರಿಯ ಶಾಸಕರು ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತಿತರರನ್ನು ಕೆಲವು ತಿಂಗಳ ಹಿಂದೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಕಾಂಗ್ರೆಸ್ನ ಹಿರಿಯ ಶಾಸಕರಲ್ಲಿ ಒಬ್ಬರಾಗಿರುವ ಸುಬ್ಬಾರೆಡ್ಡಿ ಅವರು ಈ ತಂಡದಲ್ಲಿ ಇದ್ದರು. ಈಗ ಮತ್ತೆ ಅವರು ನವದೆಹಲಿಯತ್ತ ಮುಖ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಡಾ.ಎಂ.ಸಿ.ಸುಧಾಕರ್ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿಯೂ ಮುಂದುವರಿಯಲು ಪ್ರಯತ್ನ ನಡೆಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ವಿಚಾರವಾಗಿ ಚರ್ಚಿಸಿದ್ದಾರೆ ಎನ್ನುತ್ತವೆ ಮೂಲಗಳು. ಈಗ ವರಿಷ್ಠರ ಭೇಟಿಗೆ ತೆರಳಿದ್ದಾರೆ.

ಜಿಲ್ಲೆಯ ಇಬ್ಬರು ಶಾಸಕರು ನವದೆಹಲಿ ಭೇಟಿಯು ಯಾರಿಗೆ ಸಿಹಿ ತರಲಿದೆ ಎನ್ನುವ ಕುತೂಹಲ ಕಾಂಗ್ರೆಸ್ ಕಾರ್ಯಕರ್ತರಲ್ಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-16-2060983825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.