ಚಿಕ್ಕಮಗಳೂರು: ‘ಸಾಮಾನ್ಯ ಜನರಿಗೆ ಸರಳ ಜೀವನ ನಡೆಸಲು ಪ್ರಧಾನಿ ಮೋದಿ ಅವರು ಕರೆ ಕೊಟ್ಟಿರುವುದು ಖಂಡನೀಯ’ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಹೇಳಿದರು.

‘ಚಿನ್ನ ಖರೀದಿ ಮಾಡಬೇಡಿ, ಪೆಟ್ರೋಲ್, ಡೀಸೆಲ್ ಬಾಟಲಿಯಲ್ಲಿ ತೆಗೆದುಕೊಳ್ಳಬೇಡಿ ಎಂದು ಕರೆ ಕೊಟ್ಟಿದ್ದಾರೆ. ಇದನ್ನು ನೋಡಿದಾಗ ಭಾರತ ದಿವಾಳಿಯಾಗುತ್ತಿದೆ ಎಂಬುದು ಗೊತ್ತಾಗುತ್ತಿದೆ. ಪ್ರಧಾನಿಯೊಬ್ಬರು ಈ ರೀತಿಯ ಕರೆ ಕೊಟ್ಟಿರುವುದು ದೇಶದಲ್ಲಿ ಇದೇ ಮೊದಲು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುವಲ್ಲಿ ವಿಫವಾಗಿದೆ. ರೈತರು ಗೊಬ್ಬರ ಬಳಸಬಾರದು ಎಂದು ಹೇಳುತ್ತಾರೆ. ರೈತರಿಗೆ ಯಾವುದೇ ನಿರ್ಬಂಧ ಹಾಕಬಾರದು. ರೈತರ ಜೀವನ ಅಧೋಗತಿಯತ್ತ ಹೋದರೆ ದೇಶದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕೆಡಿಪಿ ಸದಸ್ಯ ಸಂತೋಷ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್, ಹಿರೇಮಗಳೂರು ರಾಮಚಂದ್ರ, ಕಾಂಗ್ರೆಸ್ ಮುಖಂಡ ಶಾಂತಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-126-1741521740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.